ರಾಷ್ಟ್ರೀಯ ಮಟ್ಟದ ಮದರಸಾ ಕ್ರೀಡಾಕೂಟದಲ್ಲಿ ಮೆರೆದ ಭಟ್ಕಳದ ವಿದ್ಯಾರ್ಥಿಗಳು

Source: sonews | By Staff Correspondent | Published on 6th March 2019, 6:24 PM | Coastal News | Sports News | Don't Miss |

 ಅಖಿಲಾ ಭಾರತ ಮದರಸಾ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟ 
•    ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಳಿಂದ ರಾಷ್ಟ್ರೀಯ ಮಟ್ಟದ ಸಾಧನೆ

ಭಟ್ಕಳ: ದೇಶದ ವಿವಿಧ ಮದರಸಾ ವಿದ್ಯಾರ್ಥಿಗಳಿಗಾಗಿ ಇತ್ತಿಚೆಗೆ ಉತ್ತರಪ್ರದೇಶದ ಲಖ್ನೋ ದಲ್ಲಿ ಜರಗಿದ ಮದರಸಾ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಟ್ಕಳ ಸೇರಿದಂತೆ ಉತ್ತರಕನ್ನಡ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆಂದು ವರದಿಯಾಗಿದೆ.

ಗುಂಡು ಎಸೆತದಲ್ಲಿ (ಶಾಟ್ಪುಟ್) ಭಟ್ಕಳದ ಝುಹೇರ್ ಬಿನ್ ಝುಬೇರ್ ಅರ್ಮಾರ್ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. 100ಮೀಟರ್ ಓಟದಲ್ಲಿ ಹೊನ್ನಾವರ ತಾಲೂಕಿನ  ಮಂಕಿ ಗ್ರಾಮದ ಅರ್ಷ್ ಆಹಮದ್ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನಗಳಿಸಿಕೊಂಡಿದ್ದಾರೆ. ಮತ್ತು ಸುಫಿಯಾನ್ ಬಿನ್ ಸಲ್ಮಾನ್ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತರಕನ್ನಡ ಜಿಲ್ಲೆಯ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿ ಎತ್ತರಿಸಿದ್ದಾರೆ.

ರಾಷ್ಟ್ರೀಯ ಮದರಸಾ ಅಥ್ಲೆಟಿಕ್ ಕೂಟದಲ್ಲಿ ಭಟ್ಕಳ, ಹೊನ್ನಾವರದ 8 ವಿದ್ಯಾರ್ಥಿಗಳು ಸೇರಿದಂತೆ ದೇಶದ ಪ್ರಮುಖ ಮದರಸಾಗಳಿಂದ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಭಟ್ಕಳದ ವಿವಿಧ ಶಿಕ್ಷಣ ಸಂಸ್ಥೆಯ ಮುಖಂಡರು, ಮದರಸಾ ಸಂಸ್ಥೆಯ ಪ್ರಾಂಶುಪಾಲರು ಹಾಗೂ ವಿವಿಧ ಸಂಘಸಂಸ್ಥೆಗಳ ಮುಖಂಡರು ಪದಾಧಿಕಾರಿ ಅಭಿನಂದಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...