ಹಾಸನದಲ್ಲಿ ಲಾರಿಗೆ ಕಾರು ಡಿಕ್ಕಿ : ಬೆಳ್ತಂಗಡಿಯ ಇಬ್ಬರು ಸಹೋದರರ ಸಹಿತ ಮೂವರು ಸಾವು : ಓರ್ವ ಗಂಭೀರ..!

Source: so news | By MV Bhatkal | Published on 20th June 2021, 12:22 PM | State News |

ಹಾಸನ : ಲಾರಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಬೆಳ್ತಂಗಡಿ ಮೂಲದ ಇಬ್ಬರು ಸಹೋದರರ ಸಹಿತ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವನ‌ ಸ್ಥಿತಿ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ದಿ.ಗಣಪ ಗೌಡರ ಮಕ್ಕಳಾದ ಜಯಪ್ರಕಾಶ್(25) , ಯೋಗಿಶ್(23) ಎಂದು ಗುರುತಿಸಲಾಗಿದೆ. ಇನ್ನುಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ.
ಹೀಗಾಗಿ ಪೊಲೀಸರು ಗುರುತನ್ನು ಪತ್ತೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...