ಮಣಿಪುರದಲ್ಲಿ ಮತ್ತೆ ಹಿಂಸೆ; ದುಷ್ಕರ್ಮಿಗಳ ಗುಂಡಿನ ದಾಳಿಗೆ ಪೊಲೀಸ್ ಸಹಿತ ಮೂವರ ಬಲಿ; ಹತ್ಯೆ ವಿರುದ್ಧ ಇಂಫಾಲದಲ್ಲಿ ಪ್ರತಿಭಟನೆ;

Source: Vb | By I.G. Bhatkali | Published on 2nd July 2023, 10:43 AM | National News |

ಇಂಫಾಲ: ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದ ಕಾಂಗ್‌ ಪೊಕ್ಷಿ  ಜಿಲ್ಲೆಯಲ್ಲಿ ಶನಿವಾರ ಮತ್ತೆ ಗುಂಡಿನ ಕಾಳಗ ನಡೆದಿದ್ದು, ಓರ್ವ ಪೊಲೀಸ್ ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.

ಶಸ್ತ್ರಧಾರಿ ದುಷ್ಕರ್ಮಿಗಳು ಹಾಗೂ ಭದ್ರತಾಪಡೆಗಳ ನಡುವೆ ನಡೆದ ಗುಂಡಿನ ಘರ್ಷಣೆಯಲ್ಲಿ ಮೂವರು ಸಾವನ್ನಪ್ಪಿರುವ ಜೊತೆಗೆ ಹಲವರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಗ್ರಾಮದಲ್ಲಿ ಕರ್ತವ್ಯದಲ್ಲಿದ್ದ ಹೆಡ್‌ಕಾನ್‌ಸ್ಟೇಬಲ್ ಲೆಂಗ್ಲಾಂ ಡಿಮ್‌ಗೆಲ್‌ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಗುಂಡೆಸೆತಕ್ಕೆ ಬಲಿಯಾದವರಲ್ಲಿ ಇಬ್ಬರು ಮೈತ್ತೆ ಸಮುದಾಯದ ಸದಸ್ಯರೆಂದು ಇಂಡಿಯನ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ. ಈ ಗ್ರಾಮವು ಬೆಟ್ಟಪ್ರದೇಶದಲ್ಲಿದ್ದು ಕುಕಿ ಸಮುದಾಯದ ಪ್ರಾಬಲ್ಯವನ್ನು ಹೊಂದಿದೆ.

ಹಿಂಸಾಚಾರವು ಪೂರ್ವಯೋಜಿತವೆಂಬ ಮಾಹಿತಿ ಭದ್ರತಾಪಡೆಗಳಿಗೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್‌ ಪೋಕ್ಷಿ ಜಿಲ್ಲೆಯಲ್ಲಿ ಹತ್ಯೆಗಳು ನಡೆದ ಬೆನ್ನಲ್ಲೇ ರಾಜಧಾನಿ ಇಂಫಾಲದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ. ಮಹಿಳಾ ಹೋರಾಟಗಾರರು ಹಾಗೂ ಮಣಿಪುರ ಪೊಲೀಸರ ನಡುವೆ ಇಂಫಾಲದಲ್ಲಿ ಘರ್ಷಣೆ ಭುಗಿಲೆದ್ದಿರುವುದಾಗಿ ಇಂಫಾಲ ಫ್ರೀಪ್ರೆಸ್ ಸುದ್ದಿವಾಹಿನಿ ವರದಿ ಮಾಡಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...