ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಸಕಾಲ ಬೋರ್ಡುಗಳನ್ನು ಪ್ರಕಟಿಸಬೇಕು - ಜೆ.ಮಂಜುನಾಥ್

Source: so news | Published on 16th September 2019, 9:22 PM | State News | Don't Miss |

 

ಕೋಲಾರ:ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಸಕಾಲದಡಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡುವ ಕುರಿತು ಮಾಹಿತಿ ಒಳಗೊಂಡ ಸಕಾಲ ಬೋರ್ಡುಗಳನ್ನುಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದರು.
ಇಂದು ತಮ್ಮ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳಾದ ಪ್ಯಾನ್, ಪಿಠೋಪಕರಣಗಳು ಹಾಗೂ ಶೌಚಾಲಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಸಂಬಂಧ ಕಲ್ಪಿಸಿರುವ ಸೌಲಭ್ಯಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಶಾಲೆಗಳ ವಿದ್ಯಾರ್ಥಿಳಿಗೆ ಸೈಕಲ್‍ಗಳನ್ನು ಸಂಪೂರ್ಣವಾಗಿ ವಿತರಿಸಲಾಗಿದೆ. ಶಿಕ್ಷಣ ಇಲಾಖೆಯ ಭೂಮಿಯನ್ನು ಖಖಿಅ ಯಲ್ಲಿ ಇಂಡೀಕರಿಸಬೇಕು. ಜಿಲ್ಲೆಯಲ್ಲಿ ಶಿಥಿಲವಾಗಿದ್ದ ಶಾಲಾ ಕಟ್ಟಡಗಳನ್ನು ಕೆಡವಿ ಆ ಶಾಲೆಗಳನ್ನು ಬೇರೆ ಕಟ್ಟಡಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ 112 ಶಾಲಾ ಶೌಚಾಲಯಗಳಿನ್ನು ಸ್ವಚ್ಚ ಭಾರತ್ ಮಿಷನ್ ಯೋಜನೆಯಲ್ಲಿ ನಿರ್ಮಿಸಲು ಕ್ರಮವಹಿಸಿದ್ದು, ಈಗಾಗಲೇ ಶೇ 75 ರಷ್ಟು ಶೌಚಾಲಯಗಳು ನಿರ್ಮಾಣವಾಗಿದೆ ಎಂದು ತಿಳಿಸಿದರು.
ಅನರ್ಹರು ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಹೊಂದಿದ್ದರೆ, ಸೆಪ್ಟೆಂಬರ್ 30 ರೊಳಗೆ ಹಿಂದಿರುಗಿಸಬೇಕು. ನಿವೇಶನ ರಹಿತರಿಗೆ ನಿವೇಶನಗಳನ್ನು ನೀಡಲು ಜಿಲ್ಲಾಡಳಿತ ವತಿಯಿಂದ ಈಗಾಗಲೇ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಿದ್ದು, ಪಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿ ನೀಡುವಂತೆ ಮಾಲೂರು ಪುರಸಭೆಯ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.
ಅರಣ್ಯ ಇಲಾಖೆಯಿಂದ ಜಿಲ್ಲೆಯಲ್ಲಿರುವ ನಿಲಗಿರಿ ಮರಗಳನ್ನು ತೆರವುಗೊಳಿಸಬೇಕು. ಜಲಶಕ್ತಿ ಅಭಿಯಾನದಡಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳಲ್ಲಿ ಮಳೆ ನೀರಿನ ಕೊಯ್ಲು ಅಳವಡಿಸಬೇಕು. ಜಿಲ್ಲೆಯ 248 ಅಂಗನವಾಡಿ ಕಟ್ಟಡಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ. ಇದರಲ್ಲಿ 80 ನಿರ್ಮಾಣದ ಹಂತದಲ್ಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next