ಸಕಾಲ ಯೋಜನೆ ಅನುಷ್ಠಾನ ಹೊಣೆಗಾರಿಕೆ ಎಲ್ಲಾ ಸರ್ಕಾರಿ ಸಂಸ್ಥೆಗಳ ಮೇಲಿದೆ.

Source: SO News | By Laxmi Tanaya | Published on 18th December 2020, 8:16 PM | State News | Don't Miss |

ಹಾಸನ : ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಕಾಲ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಾದ ಹೊಣೆಗಾರಿಕೆ ಎಲ್ಲಾ ಸರ್ಕಾರಿ ಸಂಸ್ಥೆಗಳ ಮೇಲಿದೆ ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಟಿ. ಕೃಷ್ಣೇಗೌಡ ಹೇಳಿದ್ದಾರೆ. 

      ನಗರದ ಎಂ.ಜಿ. ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ ಸಕಾಲ ಸಪ್ತಾಹ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಿ ಕೆಲಸಗಳು ಸದಾ ಪಾರದರ್ಶಕವಾಗಿರಬೇಕೆಂಬ ಕಾರಣಕ್ಕೆ ಈ ಸಕಾಲ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಜನ ಸಾಮಾನ್ಯರಿಗೆ ಸರ್ಕಾರದ ಯಾವುದೇ ಯೋಜನೆ ತಿಳಿಯುವುದು ಇದರಿಂದ ಸುಲಭವಾಗಿದೆ. ನಮ್ಮ ಶಿಕ್ಷಣ ಇಲಾಖೆಯಲ್ಲಿ ಸಕಾಲ ಅರ್ಜಿಗಳು ಬರುವುದು ಕಮ್ಮಿ, ಆದರೇ ಬರುವ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡುವುದು ನಮ್ಮ ಕರ್ತವ್ಯವಾಗಿದೆ. ಯಾವುದೇ ಅರ್ಜಿಗಳು ಬಂದರು ಅರ್ಜಿದಾರರು ಕೇಳಿರುವ ಮಾಹಿತಿಯನ್ನು ನಿಖರವಾಗಿ ಅವರಿಗೆ ನಿಗದಿತ ದಿನಾಂಕದೊಳಗೆ ಮಾಹಿತಿಯನ್ನು ನೀಡಬೇಕು ಎಂದರು.

     ಸಕಾಲ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತೆ ಸರ್ಕಾರ ತಿಳಿಸಿದೆ. ಆದರೇ ಕೋವಿಡ್ ಹಿನ್ನೆಲೆಯಲ್ಲಿ ಕಾಲೇಜಿಗೆ ವಿದ್ಯಾರ್ಥಿಗಳು ಬಾರದೆ ಇರುವುದರಿಂದ ಜಾಗೃತಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗೆಯೇ ಜನ ಸಾಮಾನ್ಯರಿಗೂ ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ಸಾಧ್ಯವಾದಷ್ಟು ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಬೇಕಾಗಿದೆ. ಕಾಲೇಜು ಹಂತದಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

    ಈ ವೇಳೆ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಜರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...