“ಮಕ್ಕಳಲ್ಲಿ ಆರೋಗ್ಯಕರ ಸ್ವಾಸ್ಥ್ಯ ಹಾಗೂ ಸ್ಪರ್ಧಾ ಮನೋಭಾವ ಬೆಳೆಸಬೇಕು”

Source: so news | Published on 14th December 2019, 12:39 AM | State News | Don't Miss |

 

ಮಂಡ್ಯ:ಪರಮಪೂಜ್ಯ, ಪದ್ಮಭೂಷಣ ಡಾ ಶ್ರೀ ಬಾಲಗಂಗಾಂಧರನಾಥ ಸ್ವಾಮೀಜಿ ಅವರು ಅನ್ನ, ಅಕ್ಷರ, ಆರೋಗ್ಯ, ಅರಣ್ಯ, ಆಕಳು, ಆಶ್ರಯ, ಅಭಯ ಮತ್ತು ಆಧ್ಯಾತ್ಮವೆಂಬ ಅಷ್ಟ ಸೂತ್ರಗಳನ್ನು ತಮ್ಮ ಜೀವನದ ಗುರಿಗಳನ್ನಾಗಿಟ್ಟುಕೊಂಡಿದ್ದರು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಆಯೋಜಿಸಿದ್ದ, 23 ನೇ ರಾಜ್ಯ ಮಟ್ಟದ ಅಂತರ ಶಾಲಾ-ಕಾಲೇಜುಗಳ ಕ್ರೀಡಾಕೂಟದ ಉದ್ಘಾಟಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬೇಕಾದರೆ, ವಿದ್ಯೆಯ ಜತೆಗೆ ಕ್ರೀಡೆಯೂ ಕೂಡ ಮುಖ್ಯ ಎಂಬುದನ್ನು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ನಂಬಿದ್ದರು. ಈ ಹಿನ್ನಲೆಯಲ್ಲಿ ಆದಿಚುಂಚನಗಿರಿಯ ಶಿಕ್ಷಣ ಟ್ರಸ್ಟ್‍ನ ವಿದ್ಯೆ ಸಂಸ್ಥೆಗಳಲ್ಲಿನ ಮಕ್ಕಳಲ್ಲಿ ಆರೋಗ್ಯಕರ ಸ್ವಾಸ್ಥ್ಯ ಹಾಗೂ ಸ್ಪರ್ಧಾ ಮನೋಭಾವ ಬೆಳೆಸಬೇಕು ಎಂಬ ಉದ್ದೇಶದಿಂದ ರಾಜ್ಯ ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸಿದ್ದಾರೆ ಎಂದು ತಿಳಿಸಿದರು.
ಬಾಲ್ಯದ ಆಟವು ಮಕ್ಕಳಿಗೆ ಶಿಸ್ತು ಬದ್ಧ ಜೀವನ ನಡೆಸಲು ಹಾಗೂ ಕ್ರೀಡಾ ಮನೋಭಾವವನ್ನು ರೂಪಿಸಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುತ್ತದೆ. ಇಂದಿನ ಕಂಪ್ಯೂಟರ್ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಹೊರಾಂಗಣ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಕಡಿಮೆಯಾಗಿದೆ. ಇದು ಮಕ್ಕಳ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಮಕ್ಕಳು ಓದಿನ ಜತೆಗೆ ದಿನನಿತ್ಯ ಯಾವುದಾದರೂ ಒಂದು ಕ್ರೀಡೆಯಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂಬುದು ಪೂಜ್ಯರ ಅಪೇಕ್ಷೆಯಾಗಿತ್ತು ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು. ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯವಾಗಿದ್ದು, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವವನ್ನು ಮಕ್ಕಳಲ್ಲಿ ತುಂಬಬೇಕು. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸಕರಾತ್ಮಕ ಪ್ರಯೋಜನಗಳಿವೆ. ಇದನ್ನು ಮನಗಂಡು ವಿದ್ಯಾರ್ಥಿ ಜೀವನದಲ್ಲೇ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಹ ವಾತಾವರಣ ಸೃಷ್ಟಿಯಾಗಬೇಕು. ರಾಷ್ಟ್ರೀಯಾ ಮತ್ತು ಅಂತರರಾಷ್ಟ್ರೀಯಾ ಮಟ್ಟದಲ್ಲಿ ಸಾಧನೆ ಮಾಡಿರುವ ಕ್ರೀಡಾ ಪಟುಗಳಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವರಾದ ಆರ್.ಅಶೋಕ, ಕೆ.ಆರ್.ಪೇಟೆ ಶಾಸಕರಾದ ಕೆ.ಸಿ.ನಾರಾಯಣಗೌಡ, ನಾಗಮಂಗಲ ಶಾಸಕರಾದ ಕೆ.ಸುರೇಶ್‍ಗೌಡ, ತುರವೇಕೆರೆ ಶಾಸಕರಾದ ಮಸಾಲೆ ಜಯರಾಮ್, ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...