ಪ್ರವಾಹದಲ್ಲಿ ಮೃತರಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಣೆ.

Source: SO News | By Laxmi Tanaya | Published on 17th September 2020, 6:46 PM | State News | Don't Miss |

ಧಾರವಾಡ : ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಕೊಚ್ಚಿಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ  ಅವರ ಕುಟುಂಬಗಳಿಗೆ ಇಂದು ತಲಾ 5 ಲಕ್ಷ ರೂ.ಪರಿಹಾರ ನೀಡಲಾಯಿತು.

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಇವರಿಗೆ ತಲಾ 5 ಲಕ್ಷ ರೂ. ಗಳ ಪರಿಹಾರ ಧನದ ಚೆಕ್ ನೀಡಿ, ಬೆಣ್ಣೆಹಳ್ಳ ವೀಕ್ಷಿಸಿದರು.

ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ, ಅಣ್ಣಿಗೇರಿ ತಹಶೀಲ್ದಾರ ಕೊಟ್ರೇಶ, ನವಲಗುಂದ ತಹಶೀಲ್ದಾರ ನವೀನ ಹುಲ್ಲೂರ ಸೇರಿದಂತೆ  ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...