ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

Source: VB news | By I.G. Bhatkali | Published on 31st August 2021, 11:29 PM | National News | Sports News |

ಟೋಕಿಯೊ: ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ದಾಖಲೆಯನ್ನು ಹಲವು ಬಾರಿ ಪುಡಿಗಟ್ಟಿ ಚಿನ್ನದ ಪದಕ ಜಯಿಸಿ ಇತಿಹಾಸ : ಸೃಷ್ಟಿಸಿದರು.

ಭಾರತದ ಕ್ರೀಡಾಪಟುಗಳಿಗೆ ಸೋಮವಾರ ಸರಣೀಯ ದಿನವಾಗಿ ಪರಿಣಮಿಸಿತು. ಭಾರತೀಯ ಕ್ರೀಡಾಪಟುಗಳು ಒಂದೇ ದಿನ 2 ಚಿನ್ನ ಸಹಿತ ಒಟ್ಟು 5 ಪದಕಗಳನ್ನು ಜಯಿಸಿ ಗಮನಾರ್ಹ ಸಾಧನೆ ಮಾಡಿದರು.

ಜಾವಲಿನ್ ಎಸೆತಗಾರನಾಗಿ ಪರಿವರ್ತಿತ ಕುಸ್ತಿಪಟು ಸುಮಿತ್ ಆಂಟಿಲ್ ಎಫ್ 64 ಸ್ಪರ್ಧೆಯಲ್ಲಿ 68.55 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ತನ್ನದೇ ವಿಶ್ವ ದಾಖಲೆಯನ್ನು ಹಲವು ಬಾರಿ ಪುಡಿಗಟ್ಟಿ ಚಿನ್ನದ ಪದಕ ಜಯಿಸಿ ಇತಿಹಾಸ ಸಷ್ಟಿಸಿದರು .

ಶೂಟರ್ ಅವನಿ ಲೇಖರ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹಿರಿಮೆಯೊಂದಿಗೆ ಇತಿಹಾಸ ನಿರ್ಮಿಸಿದರು. ಆರ್-2 ಮಹಿಳೆಯರ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್1 ಇಮೆಂಟ್‌ನಲ್ಲಿ 19ರ ಹರೆಯದ ಅವನಿ ಒಟ್ಟು 249.6 ಅಂಕ ಗಳಿಸಿ ವಿಶ್ವದಾಖಲೆಯನ್ನು ಸರಿಗಟ್ಟಿ ಮೊದಲ ಸ್ಥಾನ ಪಡೆದರು.

ಜೈಪುರದ ಶೂಟರ್ ಪ್ಯಾರಾಲಿಂಪಿಕ್ಸ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದರು. ಪರುಷರ ಎಫ್ 56 ಸ್ಪರ್ಧೆಯಲ್ಲಿ ಡಿಸ್ಕಸ್  6ನೇ ಹಾಗೂ ಕೊನೆಯ ಪ್ರಯತ್ನದಲ್ಲಿ 44.38 ಮೀ ದೂರಕ್ಕೆ ಡಿಸ್‌ ಎಸೆದು 2ನೇ ಸ್ಥಾನ ಪಡೆದರು. ಪ್ಯಾರಾಲಿಂಪಿಕ್ಸ್ ನಲ್ಲಿ ಈಗಾಗಲೇ 2 ಬಾರಿ ಚಿನ್ನದ ಪದಕ ಜಯಿಸಿರುವ ಜಾವೆಲಿನ್ ಎಸೆತದ ದಂತಕತೆ ದೇವೇಂದ್ರ ಝಾಝರಿಯಾ ಪುರುಷರ ಜಾವಲಿನ್ ಎಸೆತದ ಎಫ್-46ರಲ್ಲಿ 64.35 ಮೀ.ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕದೊಂದಿಗೆ ಒಲಿಂಪಿಕ್ಸ್‌ನಲ್ಲಿ 3ನೇ ಪದಕ ಬಾಚಿಕೊಂಡರು. ಇದೇ ಸ್ಪರ್ಧೆಯಲ್ಲಿ ಸುಂದರ್ ಸಿಂಗ್ ಗುರ್ಜರ್ 64.01 ಮೀ.ದೂರಕ್ಕೆ ಜಾಮಲಿನ ಎಸೆದು ಕಂಚಿನ ಪದಕ ತನ್ನದಾಗಿಸಿಕೊಂಡರು.

Read These Next

ಹೈದರಾಬಾದ್ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಎನ್‌ಕೌಂಟರ್‌ ನಕಲಿ. ಸುಪ್ರೀಂ ಕೋರ್ಟ್ ನೇಮಿತ ಆಯೋಗ

ದಿಶಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಸಾವಿನ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನಿಂದ ...

ಶಾಲಾ ಪಠ್ಯ ಪುಸ್ತಕಗಳು ಆರೆಸಸ್ ಮಯ; ಕೇಜ್ರಿವಾಲ್, ಭಗವಂತ್ ಮಾನ್ ಸಹಿತ ಹಲವು ಮುಖಂಡರಿಂದ ಆಕ್ರೋಶ

ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ರಂತಹ ರಾಷ್ಟ್ರ ಪ್ರೇಮಿಗಳ ಅಧ್ಯಾಯಗಳನ್ನು ಕಿತ್ತು ಹಾಕಿ, ಸ್ವಾತಂತ್ರ್ಯ ಹೋರಾಟದಲ್ಲಿ ಯಾವ ಪಾತ್ರವೂ ...

ದೇಶದ್ರೋಹ ಕಾನೂನಿಗೆ ತಡೆ; ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪು; ಪುನರ್‌ಪರಿಶೀಲನೆ ಪೂರ್ಣಗೊಳ್ಳುವವರೆಗೆ ವಿರಾಮ

ಸರಕಾರದಿಂದ ದೇಶದ್ರೋಹ ಕಾನೂನಿನ ಪುನರ್‌ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಈ ವಿವಾದಾತ್ಮಕ ಕಾನೂನಿನಿಂದ ಕೇಂದ್ರ ಮತ್ತು ರಾಜ್ಯ ...

ಮೂಡುಬಿದಿರೆ:  ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್: ಭಾರತೀಯ ರೈಲ್ವೇ ಹಾಗೂ ಕೆನರಾ ಬ್ಯಾಂಕ್ ಮುನ್ನಡೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಬಾಲ್‍ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾದ ಸಹಭಾಗಿತ್ವದಲ್ಲಿ ನಡೆಯುತ್ತಿರುವ 67ನೇ ...

ಮೊದಲ ಬಾರಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯ; ವಾರ್ನರ್, ಮಾರ್ಷ್ ಅಬ್ಬರದ ಬ್ಯಾಟಿಂಗ್

ಆಲ್‌ರೌಂಡರ್ ಮಿಚೆಲ್ ಮಾರ್ಷ್ (ಔಟಾಗದೆ 77, 50 ಎಸೆತ, 6 ಬೌಂಡರಿ, 4 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (53, 38 ಎಸೆತ, 4 ...