ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Source: ANI | By MV Bhatkal | Published on 20th June 2021, 7:31 PM | National News | Don't Miss |

ನವದೆಹಲಿ:ನಾಳೆ ೭ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಸಮಾರಂಭ ನಾಳೆ ಬೆಳಿಗ್ಗೆ ೬.೧೫ಕ್ಕೆ ಆರಂಭವಾಗಲಿದೆ. ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ.
ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯಲ್ಲಿ ಈ ಯೋಗ ಪ್ರದರ್ಶನ ನಡೆಯಲಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಕೋವಿಡ್ ಹಿನ್ನೆಲೆಯಲ್ಲಿ ದೂರ ದರ್ಶನ ಕಾರ್ಯಕ್ರಮವಾಗಿ ಆಯೋಜಿಸಲಾಗಿದೆ.
ಜನರು ಮನೆಯಲ್ಲೇ ಕುಳಿತುಕೊಂಡು ನೇರ ಕಾರ್ಯಕ್ರಮ ವೀಕ್ಷಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಪ್ರಧಾನಿ ಭಾಷಣ ಮುಗಿದ ನಂತರ ಯೋಗಾಭ್ಯಾಸ ಪ್ರದರ್ಶಣ ಪ್ರಸಾರವಾಗಲಿದೆ.
ಬೆಂಗಳೂರಿನಲ್ಲೂ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜನರು ಮನೆಯಲ್ಲೇ ಕುಳಿತು ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...