ಕುಮಟಾ: ಬೈಕ್‌ಗೆ ತೂಫಾನ್ ಡಿಕ್ಕಿ: ಬೈಕ್ ಸವಾರ ಸಾವು, 8 ಮಂದಿಗೆ ಗಾಯ

Source: S O News | By I.G. Bhatkali | Published on 5th June 2023, 6:42 AM | Coastal News | Don't Miss |

ಕುಮಟಾ: ಪಟ್ಟಣದ ಹೊನ್ಮಾವ್ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಇಳಿಜಾರಿನಲ್ಲಿ ತೂಫಾನ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟರೆ, ತುಪಾನ್ ವಾಹನದ ಚಾಲಕ ಸೇರಿದಂತೆ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.

ಪಟ್ಟಣದ ಸಿದ್ದನಬಾವಿ ನಿವಾಸಿ ಲಂಬೋದರ ನಾಗೇಶ ಉಪ್ಪಾರ (28) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ, ಈತನು ಅಳ್ವೆಕೋಡಿಯಿಂದ ಕುಮಟಾ ಕಡೆ ತೆರಳುತ್ತಿರುವ ಸಂದರ್ಭದಲ್ಲಿ ಗದಗನಿಂದ ಮಂಗಳೂರಿಗೆ ತೆರಳುತ್ತಿದ್ದ ತೂಫಾನ್ ವಾಹನ ಡಿಕ್ಕಿ ಹೊಡೆದು ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದ ರಭಸಕ್ಕೆ ತುಪಾನ್ ವಾಹನದಲ್ಲಿದ್ದ ಇಳಕಲ್, ಬಾದಾಮಿ, ಗಜೇಂದ್ರಗಡ, ಕುಷ್ಠಗಿ ಹಾಗೂ ಗದಗ ನಿವಾಸಿಗಳಾದ ಸಂಗಪ್ಪ ಗುಗ್ಗರಿ (38), ಸಂತೋಷ ಶಂಕರಗುಡಿ (34), ಸುಭಾಸ (21), ಶರಣಮ್ಮ ಕಂಚೇರ (32), ಯಶ್ವಂತ ಕಂಚೇರ (9), ಸ್ವಂದನಾ ಗುಗ್ಗರಿ (6), ದುರ್ಗೇಶ ಕಂಚೇರ (23), ಶ್ರೀನಿವಾಸ ರಾಠೋಡ (15), ಶ್ರೀಕಾಂತ ಜಾಲಿಹಾಲ (25) ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ತಕ್ಷಣ ಭೇಟಿ ನೀಡಿದ ಕುಮಟಾ ಪೊಲೀಸರು ಗಾಯಗೊಂಡವರನ್ನು ಸ್ಥಳೀಯರ ಸಹಕಾರದಲ್ಲಿ ಅಂಬುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. 

ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...