ಹೊಸದಿಲ್ಲಿ: ವ್ಯಾಪಂನಂತಹಪಕರಣ ಶಿಕ್ಷಣ ವ್ಯವಸ್ಥೆಗೆ ಮಾರಕ

Source: VB | By JD Bhatkali | Published on 24th February 2021, 8:26 PM | National News |

ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ಭಾರತದ ಶಿಕ್ಷಣ ವ್ಯವಸ್ಥೆ ಹಾಳಾಗುತ್ತಿದೆ. ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂನಂತಹ ಪ್ರಕರಣಗಳು ಶಿಕ್ಷಣ ವ್ಯವಸ್ಥೆಯನ್ನು ವಿಕೃತಗೊಳಿಸುತ್ತವೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

2016ರಲ್ಲಿ ಕರ್ನಾಟಕದಲ್ಲಿ ಸುಪ್ರೀಂಕೋರ್ಟ್ ನಡೆದ ಪಿಯುಸಿ ಪರೀಕ್ಷೆಯ ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರಯ್ಯಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಸಂದರ್ಭ ಸುಪ್ರೀಂಕೋರ್ಟ್, ಈ ಸಂಬಂಧ ಜಾಮೀನನ್ನು ಯಾಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ಶಿವಕುಮಾರಯ್ಯಗೆ ನೋಟಿಸ್ ಜಾರಿಗೊಳಿಸಿದೆ.

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಪ್ರಮುಖ ಆರೋಪಿ ಶಿವಕುಮಾರಯ್ಯಗೆ ಜಾಮೀನು ಮಂಜೂರು ಮಾಡಿದ್ದರೆ, ಸಹ ಆರೋಪಿ ಓಬಳರಾಜುವನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು. ನಾವು ಇಂತಹವರಿಗೆ (ಪ್ರಶ್ನೆಪತ್ರಿಕೆ ಸೋರಿಕೆ ಮಾಡುವವರಿಗೆ) ಒಂದು ಕಠಿಣ ಸಂದೇಶ ರವಾನಿಸಬೇಕಿದೆ. ಇಂತಹವರು ದೇಶದ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಮಧ್ಯಪ್ರದೇಶದ ವ್ಯಾಪಂ ಹಗರಣದಲ್ಲಿ ಏನಾಗಿದೆ ಎಂಬುದು ನಮಗೆಲ್ಲಾ ತಿಳಿದಿದೆ ಎಂದು ಹೇಳಿದ ಮೂವರು ಸದಸ್ಯರ ನ್ಯಾಯಪೀಠ, ಸಹ ಆರೋಪಿಯನ್ನು ಖುಲಾಸೆಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಮತ್ತು ಮುಖ್ಯ ಆರೋಪಿ ಶಿವಕುಮಾರಯ್ಯಗೆ ನೋಟಿಸ್ ಜಾರಿಗೊಳಿಸಿದೆ. ಮಧ್ಯಪ್ರದೇಶದಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಮತ್ತು ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಮಧ್ಯಪ್ರದೇಶ ಪರೀಕ್ಷಾ ಮಂಡಳಿ(ವ್ಯಾಪಂ) ನಡೆಸುವ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ 2016ರಲ್ಲಿ ಸಿಬಿಐಗೆ ವಹಿಸಿತ್ತು.

Read These Next

ಪ್ರತಿಭಟನಾ ಸಂದರ್ಭದಲ್ಲಿ ಪ್ರತಿಭಟನಾಕಾರರಿಂದ ರಸ್ತೆ ತಡೆಗೆ ಸುಪ್ರೀಂಕೋರ್ಟ್ ಗರಂ

ಹೊಸದಿಲ್ಲಿ : ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುವುದಕ್ಕಾಗಿ ರಸ್ತೆ ಸಂಚಾರಕ್ಕೆ ತಡೆಯೊಡ್ಡುವುದನ್ನು ಇನ್ನೂ ಕೂಡಾ ...

ಗೋಕರ್ಣ ಮಹಾಬಲೇಶ್ವರ ದೇವಾಲಯದ ಹೊಣೆ ಇನ್ಮುಂದೆ ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿಗೆ. ರಾಮಚಂದ್ರಪುರ ಮಠಕ್ಕೆ ಹಿನ್ನಡೆ.

ನವದೆಹಲಿ : ‌ಉತ್ತರಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣದ ಪುರಾಣ ಪ್ರಸಿದ್ದ ಶ್ರೀ ಮಹಾಬಲೇಶ್ವರ ದೇವಾಲಯವನ್ನ ಸುಪ್ರೀಂಕೋರ್ಟ್ ನಿವೃತ್ತ ...

ಪಶ್ಚಿಮಬಂಗಾಳ: ರೋಡ್‌ ಶೋನಲ್ಲಿ ಸೇರಿದ ಭಾರೀ ಜನಸ್ತೋಮ; ಇಷ್ಟೊಂದು ಜನ ಸೇರಿದ್ದು ನೋಡಿರಲೇ ಇಲ್ಲ; ಮೋದಿ

ಪಶ್ಚಿಮಬಂಗಾಳದ ಅಸ್ಸನ್‌ಸೋಲ್‌ನಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಜನಸಂದಣಿಗೆ ಶ್ಲಾಘನೆ ...