ರಾಜ್ಯದಲ್ಲಿ ಟ್ರ್ಯಾಕ್ಟರ್‌ ಪರೇಡ್‌: ಬೆಳಗಾವಿ ರೈತರಿಗೆ ಆರ್‌ಟಿಒ, ಪೊಲೀಸರಿಂದ ವಾಹನ ಜಪ್ತಿ ಬೆದರಿಕೆ

Source: SO News | Published on 23rd January 2021, 11:03 PM | State News | Don't Miss |

ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಜ. 26ರಂದು ದೆಹಲಿಯಲ್ಲಿ ರೈತರು ನಡೆಸುತ್ತಿರುವ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ರಾಜ್ಯದಲ್ಲೂ ಟ್ರ್ಯಾಕ್ಟರ್‌ ಪರೇಡ್ ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆಯ ಮೂಲಕ ಟ್ರ್ಯಾಕ್ಟರ್‌ ಪರೇಡ್‌ ಹಮ್ಮಿಕೊಳ್ಳಲಾಗಿದ್ದು, ಬೆಳಗಾವಿಯಿಂದ ಬೆಂಗಳೂರಿನತ್ತ ಹೊರಟ ರೈತರನ್ನು ಜಿಲ್ಲಾ ಪೊಲೀಸ್‌ ಮತ್ತು ಆರ್‌ಟಿಒ ಅಧಿಕಾರಿಗಳು ತಡೆದಿದ್ದು, ವಾಹನ ಜಪ್ತಿ ಮಾಡುವ ಬೆದರಿಕೆ ಹಾಕಿದ್ದಾರೆ.

ಹುಕ್ಕೇರಿ ತಾಲೂಕು ಗೋಡೆಗೇರಿ ಗ್ರಾಮದ ಬಳಿ ವಾಹನಗಳನ್ನು ತಡೆಯಲಾಗಿದ್ದು, ಸೂಕ್ತ ದಾಖಲೆಗಳಿಲ್ಲದೇ ಇರುವುದರಿಂದ ವಾಹನಗಳನ್ನು ಜಪ್ತಿ ಮಾಡಬಹುದು. ಹಿಂದುರುಗಿ ಎಂದಿದ್ದಾರೆ ಎಂದು ರೈತರು ಮಾಸ್‌ ಮೀಡಿಯಾ ಫೌಂಡೇಷನ್‌ಗೆ ತಿಳಿಸಿದ್ದಾರೆ.

ಜ. 26ರಂದು ರಾಜ್ಯದ ವಿವಿಧೆಡೆಯಿಂದ ರೈತರು ಟ್ರ್ಯಾಕ್ಟರ್‌ ಹಾಗೂ ಇತರೆ ವಾಹನಗಳೊಂದಿಗೆ ಬೆಂಗಳೂರಿನಲ್ಲಿ ಸೇರುತ್ತಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬೃಹತ್‌ ಸಮಾವೇಶ ನಡೆಸಲಿದ್ದಾರೆ.

ಬೆಳಗಾವಿಯಲ್ಲಿ ರೈತರನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿದಂಗೆ ಸಂಯುಕ್ತ ಹೋರಾಟ ವೇದಿಕೆ ಮುಖಂಡರಾದ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, ಒಂದು ವೇಳೆ ರೈತರನ್ನು ತಡೆಯುವ ಯತ್ನ ಮಾಡಿದರೆ ರಾಜ್ಯದ ಜನತೆಗೆ ಬೀದಿಗಿಳಿಯುವುದು ಖಚಿತ. ನಾವು ರಾಜ್ಯದ ನಾಲ್ಕೂ ದಿಕ್ಕುಗಳಿಂದ ರೈತರು ಬೆಂಗಳೂರಿನಲ್ಲಿ ಸೇರಲಿದ್ದು, ಪೊಲೀಸರು ಸೂಕ್ತ ಸಹಕಾರ ನೀಡುವಂತೆ ಮನವಿ ಮಾಡುತ್ತೇವೆ. ಬೆಳಗಾವಿಯ ಜಿಲ್ಲಾ ಪೊಲೀಸ್‌ ವರಿಷ್ಠರು ಹಾಗೂ ಮಹಾನಿರ್ದೇಶಕರೊಂದಿಗೆ ಮಾತನಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು. 

ಜ. 26ರಂದು ಬೆಂಗಳೂರಿನಲ್ಲಿ ಸುಮಾರು 5000 ಟ್ರ್ಯಾಕ್ಟರ್‌ ಹಾಗೂ ಇತರೆ ವಾಹನಗಳು ಜಮೆಯಾಗಲಿದ್ದು ಸುಮಾರು 25,000 ಹೋರಾಟಗಾರರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಂಯುಕ್ತ ಹೋರಾಟ ವೇದಿಕೆ ತಿಳಿಸಿದೆ.

ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವವನ್ನು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್‌ ಪರೇ‌ಡ್ ನಡೆಸುವ ಮೂಲಕ ವಿಭಿನ್ನವಾಗಿ ಹೋರಾಟ ಮುಂದುವರೆಸಲು ದೇಶಾದ್ಯಂತ ರೈತ ಸಂಘಟನೆಗಳು ತೀರ್ಮಾನಿಸಿವೆ. ಇದರ ಭಾಗವಾಗಿ ಇಂದು ಬೆಳಗಾವಿಯಲ್ಲಿ ಆರಂಭವಾಗಬೇಕಿದ್ದ ಟ್ಯ್ರಾಕ್ಟರ್ ರ್ಯಾಲಿಗೆ ಪೊಲೀಸ್ ಮತ್ತು ಆರ್‌ಟಿಓ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ತಮ್ಮ ಆದೇಶ ಉಲ್ಲಂಘಿಸಿ ಪರೇಡ್ ನಡೆಸುವ ಟ್ಯ್ರಾಕ್ಟರ್‌ಗಳನ್ನು ಸೀಜ್ ಮಾಡುವುದಾಗಿ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಜ.26 ರಂದು ಬೆಂಗಳೂರಿನಲ್ಲಿ ಜನ-ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪರೇ‌ಡ್ ನಡೆಸಲು ನೂರಾರು ಸಂಘಟನೆಗಳು ತೀರ್ಮಾನಿಸಿವೆ. ಅದರ ಭಾಗವಾಗಿ ರಾಜ್ಯದ ಹಲವು ಭಾಗಗಳಿಂದ ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹಲವು ಜಿಲ್ಲೆಗಳಲ್ಲಿ ರ್ಯಾಲಿ ನಡೆಸಿ ಜನವರಿ 26 ರಂದು ಬೆಂಗಳೂರು ತಲುಪಲು ನಿರ್ಧರಿಸಿದ್ದರು. ಅದರಂತೆ ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಟ್ಯ್ರಾಕ್ಟರ್‌ ರ್ಯಾಲಿ ಆರಂಭವಾಗಿದ್ದು, ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಜಾಥಾಗೆ ಚಾಲನೆ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ತಲುಪಿ ನಂತರ ಧಾರವಾಡದ ಮೂಲಕ ಸಂಜೆಗೆ ಹುಬ್ಬಳ್ಳಿ ತಲುಪಲು ಯೋಜಿಸಲಾಗಿತ್ತು. ಆದರೆ ಇದನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಆರ್‌ಟಿಓ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದು ರೈತರ ವಾಹನಗಳನ್ನು ವಶಕ್ಕೆ ಪಡೆಯುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.

"ನಿಮ್ಮ ಟ್ರ್ಯಾಕ್ಟರ್‌ಗಳಿಗೆ ಇನ್ಶೂರೆನ್ಸ್ ಕಟ್ಟಿಲ್ಲ ಎಂಬುದನ್ನು ಮರೆಯಬೇಡಿ. ನಾವು ಹೋಗಲಿ ಎಂದು ಸುಮ್ಮನಿದ್ದೇವೆ. ಈಗ ನೀವು ರ್ಯಾಲಿ ಹೊರಟರೆ ಖಂಡಿತ ನಿಮ್ಮ ವಾಹನಗಳನ್ನು ಸೀಜ್‌ ಮಾಡುವುದಾಗಿ ಆರ್‌ಟಿಓ ಅಧಿಕಾರಿಗಳು ಬೆದರಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ನೀಡಿದ್ದಾರೆ" ಎಂದು ರೈತರು ತಿಳಿಸಿದ್ದಾರೆ.

ನಾವು ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಡನೆ ಮಾತನಾಡಲು ಕರೆ ಮಾಡುತ್ತಿದ್ದೇವೆ. ಆದರೆ ನಮ್ಮ ಯಾವುದೇ ಕರೆಗಳನ್ನು ಅವರು ಸ್ವೀಕರಿಸುತ್ತಿಲ್ಲ. ಬೇಕಂತಲೇ ಅವು ನಮ್ಮ ಕರೆ ಸ್ವೀಕರಿಸದೇ ಈ ನ್ಯಾಯಯುತ ರೈತ ಹೋರಾಟ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಫಲವಾಗುವುದಿಲ್ಲ. ನಮ್ಮ ಟ್ಯ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡದಿದ್ದರೆ ಸರ್ಕಾರ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು ಮೈಸೂರು ಕಡೆಯಿಂದ, ಹೈದರಾಬಾದ್ ಕರ್ನಾಟಕ ಕಡೆಯಿಂದ, ಕೋಲಾರ- ಚಿಕ್ಕಬಳ್ಳಾಪುರದಿಂದ, ಹಾಸನ-ಚಿಕ್ಕಮಗಳೂರು ಕಡೆಯಿಂದ ಸೇರಿದಂತೆ ರಾಜ್ಯದ ಐದು ದಿಕ್ಕುಗಳಿಂದಲೂ ಬರುವ ಟ್ರಾಕ್ಟರ್‌ಗಳು ಜನವರಿ 26 ರಂದು ಬೆಂಗಳೂರು ನಗರವನ್ನು ಪ್ರವೇಶಿಸಿ ಪರೇಡ್ ನಡೆಸಲಾಗುತ್ತದೆ ಎಂದು ಹೋರಾಟಗಾರು ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...