69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್‌ ಪರೇಡ್‌ ನಡೆದಿತ್ತು.

Source: SO News | By Laxmi Tanaya | Published on 23rd January 2021, 10:51 PM | National News | Special Report | Don't Miss |

ನವದೆಹಲಿ, ಜ. 21: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹೋರಾಟ ನಡೆಸುತ್ತಿರುವ ರೈತರು ಜ. 26ರಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸುತ್ತಿರುವುದು ತಿಳಿದೇ ಇದೆ.  ಆದರೆ 69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವಂದು ನಡೆದ ಪರೇಡ್‌ನಲ್ಲಿ ಟ್ಯಾಕ್ಟರ್‌ಗಳು ಸಂಚರಿಸಿದ್ದವು!

ಜ. 26ರಂದು ಗಣರಾಜ್ಯೋತ್ಸವಂದು ಪರೇಡ್‌ ನಡೆಸುವುದು ರೂಢಿ. ಆ ದಿನ ವಿದೇಶಿ ಗಣ್ಯರೊಬ್ಬರು ಅತಿಥಿಯಾಗಿ ಪಾಲ್ಗೊಳ್ಳುತ್ತಾರೆ ಮತ್ತು ಪರೇಡ್‌ಗೆ ಸಾಕ್ಷಿಯಾಗುತ್ತಾರೆ. ಆದರೆ ಈ ಬಾರಿ ಪರೇಡ್‌ ಸಂದರ್ಭದಲ್ಲಿ ರೈತರು ತಮ್ಮ ಹೋರಾಟದ ಭಾಗವಾಗಿ ಟ್ರ್ಯಾಕ್ಟರ್‌ ಪರೇಡ್‌ ನಡೆಸುವುದನ್ನು ದೇಶಕ್ಕೆ ಮಾಡುವ ಅವಮಾನ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ. 

ಆದರೆ 1952ರಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಟ್ಯಾಕ್ಟರ್‌ಗಳ ಸಾಲು ಸಾಲು ಮೆರವಣಿಗೆ ನಡೆದಿತ್ತು ಎಂಬುದು ಈಗ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಟ್ರ್ಯಾಕ್ಟರ್‌ ಪರೇಡ್‌ ಹೊಸದಲ್ಲ. ಸರ್ಕಾರ ಇದನ್ನು ಅವಮಾನದ ಸಂಗತಿಯಾಗಿ, ಮುಜುಗರದ ವಿಷಯವಾಗಿ ನೋಡುವ ಅಗತ್ಯವಿಲ್ಲ. ಗಣತಂತ್ರ ಪ್ರತಿಯೊಬ್ಬನ ಹಕ್ಕನ್ನು ಎತ್ತಿಹಿಡಯುವ ದಿನ. ಹಾಗಾಗಿ ಅಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸುವುದೂ ರೈತರ ಹಕ್ಕು ಎಂಬ ಪ್ರತಿಪಾದಿಸಲಾಗುತ್ತಿದೆ. 

ಆಗ ಪರೇಡ್‌ನಲ್ಲಿ ಪಾಲ್ಗೊಂಡಿದ್ದ  ಟ್ರ್ಯಾಕ್ಟರ್‌ನ ಕಪ್ಪುಬಿಳುಪಿನ ಚಿತ್ರಗಳು ಹರಿದಾಡುತ್ತಿವೆ. 

ದೆಹಲಿ ಗಡಿಗಳಲ್ಲಿ ಜ. 26ರ ಪರೇಡ್‌ಗೆ ತಮ್ಮ ಟ್ರ್ಯಾಕ್ಟರ್‌ಗಳಿಗೆ ಅಲಂಕಾರ ಮಾಡುವ ಮೂಲಕ ಸಿದ್ಧತೆ ನಡೆಸುತ್ತಿರುವಾಗ ಐತಿಹಾಸಿಕ ಚಿತ್ರಗಳು ಹರಿದಾಡುತ್ತಿರುವುದು ರೈತರ ಹೋರಾಟಕ್ಕೆ ಹೊಸ ಹುರುಪು ತುಂಬಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...