ಘನ ತ್ಯಾಜ್ಯ ವಿಲೇವಾರಿ ವಾಹನಗಳ ಹಸ್ತಾಂತರ

Source: so news | Published on 9th July 2020, 12:30 AM | State News | Don't Miss |

ಧಾರವಾಡ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಅನುದಾನದಲ್ಲಿ ಮಹಾನಗರ ಪಾಲಿಕೆಗೆ ಘನ ತ್ಯಾಜ್ಯ ವಿಲೇವಾರಿಯನ್ನು ವ್ಯವಸ್ಥಿತವಾಗಿ ಕೈಗೊಳ್ಳಲು 15 ಕಸ ಸಂಗ್ರಹಣಾ ಟಿಪ್ಪರ್ ವಾಹನಗಳನ್ನು ಒದಗಿಸಲಾಗಿದೆ. ಈ ವಾಹನಗಳನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದರು.
ಪ್ರತಿ ವಾಹನದ ಮೌಲ್ಯ 9.5 ಲಕ್ಷಗಳಾಗಿವೆ. 4.6 ಕ್ಯೂಬಿಕ್ ಮೀಟರ್ ಸಾಮಥ್ರ್ಯ ಹೊಂದಿದೆ. ಹಸಿ ಕಸ ಮತ್ತು ಒಣ ಕಸ ವಿಂಗಡಣೆಗಳಿಗೆ 15 ವಾಹನಗಳಿಗೆ 4.5 ಲಕ್ಷ ವೆಚ್ಚದಲ್ಲಿ ವ್ಯವಸ್ಥೆ ಮಾಡಲಾಗಿದೆ. ಒಟ್ಟು 1.42 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿರುವ ವಾಹನಗಳನ್ನು ಪಾಲಿಕೆಗೆ ಹಸ್ತಾಂತರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಶಾಸಕರಾದ ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಸಿ.ಎಂ. ನಿಂಬಣ್ಣವರ, ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ, ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್, ವಿಶೇಷ ಅಧಿಕಾರಿ ಎಸ್.ಎಚ್. ನರೇಗಲ್ ಮತ್ತಿತರರು ಇದ್ದರು. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...