ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ದೇಬ್ ರಾಜೀನಾಮೆ; ಮಾಣಿಕ್ ಸಹಾ ನೂತನ ಸಿಎಂ

Source: S O News | By I.G. Bhatkali | Published on 16th May 2022, 8:40 AM | National News | Don't Miss |

ಅಗರ್ತಲ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇಬ್ ಅವರು ತನ್ನ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ತಾನು ರಾಜ್ಯಪಾಲ ಸತ್ಯದೇವ ನಾರಾಯಣ ಅರ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ಈ ಹೊಸ ಬೆಳವಣಿಗೆ ನಡೆದಿದೆ. “ಪಕ್ಷವನ್ನು ಬಲಪಡಿಸಲು ನಾನು ಕೆಲಸ ಮಾಡಬೇಕೆಂದು ಬಿಜೆಪಿ ಬಯಸುತ್ತದೆ” ಎಂದು ರಾಜೀನಾಮೆ ನೀಡಿದ ನಂತರ ಬಿಪ್ಲವ್ ದೇಬ್ ಅವರು ಹೇಳಿದ್ದಾರೆ. “ರಾಜ್ಯದಲ್ಲಿ ಬಿಜೆಪಿಯ ತಳಹದಿಯನ್ನು ಬಲಪಡಿಸಲು, ನಾನು ವಿವಿಧ ವಲಯಗಳಲ್ಲಿ ತಳಮಟ್ಟದಿಂದ ಕಾರ್ಯ ನಿರ್ವಹಿಸಬೇಕಾಗಿದೆ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಸರಕಾರವನ್ನು ಮತ್ತೆ ಅಸ್ತಿತ್ವಕ್ಕೆ ತರಲು ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವುದ ಕ್ಕಿಂತ ಸಾಮಾನ್ಯ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಬೇಕಿದೆ' ಎಂದು ಬಿಪ್ಲವ್ ದೇಬ್ ಹೇಳಿದ್ದಾರೆ.

ಮಾಣಿಕ್ ಸಹಾ ನೂತನ ಸಿಎಂ:
ತ್ರಿಪುರಾದ ನೂತನ ಮುಖ್ಯ ಮಂತ್ರಿಯಾಗಿ ಬಿಜೆಪಿಯ | ತ್ರಿಪುರಾ ಘಟಕದ ಅಧ್ಯಕ್ಷ ಮಾಣಿಕ್ ಸಹಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯ ಶಾಸಕಾಂಗ ಪಕ್ಷ ಮಾಣಿಕ್ ಸಹಾ ಅವರನ್ನು ನೂತನ ಮುಖ್ಯ ಮಂತ್ರಿಯಾಗಿ ಆಯ್ಕೆ ಮಾಡಿದೆ ಎಂದು ಬಿಜೆಪಿಯ ತ್ರಿಪುರಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಟ್ವಿಟ್ ಮಾಡಿದ್ದಾರೆ.

ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿರುವ ಸಹಾ ಅವರು ಯಾವಾಗ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ.

ಸಹಾ ಅವರು ಬಿಜೆಪಿ ಸೇರಲು 2016ರಲ್ಲಿ ಕಾಂಗ್ರೆಸ್ ತ್ಯಜಿಸಿದ್ದರು. 2020ರಲ್ಲಿ ಅವರು ಬಿಜೆಪಿಯ ತ್ರಿಪುರಾ ಘಟಕದ ವರಿಷ್ಠರಾಗಿ ಅಧಿಕಾರ ಸ್ವೀಕರಿಸಿದ್ದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...