ಮಾಸ್ಕೋ: ಅಂಗರಕ್ಷಕನಿಂದಲೇ ತುರ್ಕಿಯ ರಷ್ಯಾ ರಾಯಭಾರಿಯ ಹತ್ಯೆ

Source: so news | By Arshad Koppa | Published on 20th December 2016, 8:37 AM | Global News | Don't Miss |

ಮಾಸ್ಕೋ: ಟರ್ಕಿ-ರಷ್ಯಾ ನಡುವಿನ ಹಗೆತನ ಉಲ್ಬಣಿಸುತ್ತಿರುವ ಸಂದರ್ಭದಲ್ಲೇ ಟರ್ಕಿ ರಾಜಧಾನಿ ಅಂಕಾರಾದಲ್ಲಿ ರಷ್ಯಾ ರಾಯಭಾರಿಯನ್ನು ಸಾರ್ವಜನಿಕವಾಗಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಪೊಲೀಸ್ ವೇಷದಲ್ಲಿದ್ದ ಶಂಕಿತ ಐಸಿಸ್ ಉಗ್ರ ಎನ್ನಲಾದ ವ್ಯಕ್ತಿಯೊಬ್ಬ ಈ ದಾಳಿ ನಡೆಸಿದ್ದು, ಆತನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ವಸ್ತುಪ್ರದರ್ಶನದ ವೇಳೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ರಷ್ಯಾ ರಾಯಭಾರಿ ಆಂಡ್ರಿ ಕಲೋವ್ ಮೇಲೆ ದಾಳಿ ನಡೆದಿದೆ. ಕರ್ಲೋವ್ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ಇತರೆ ಮೂವರಿಗೂ ಗಾಯಗಳಾಗಿದೆ.

ರಾಯಭಾರಿ ಹತ್ಯೆ ನಂತರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತುರ್ತು ಸಭೆ ನಡೆಸಿದ್ದು, ಮುಂದಿನ ತೀರ್ವನಗಳ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಟರ್ಕಿ ಹಾಗೂ ರಷ್ಯಾ ನಡುವಿನ ಸಂಬಂಧಕ್ಕೆ ಈ ಘಟನೆ ಶಾಶ್ವತ ತಡೆಗೋಡೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Read These Next

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...