ರಸ್ತೆ ಅಪಘಾತಕ್ಕೆ ಕಿರುತೆರೆ ನಟಿ ಸಾವು! ಕಾರಿನ ಚಕ್ರ ಸ್ಪೋಟಕ್ಕೆ ಬಲಿಯಾದ ಪ್ರತಿಭಾನ್ವಿತೆ!

Source: S.O. News Service | Published on 18th July 2019, 7:34 PM | State News | Don't Miss |

ಬೆಂಗಳೂರಿ:ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಸಾವನ್ನಪ್ಪಿದ ಘಟನೆ ನಡೆದಿದೆ.  ಚಿತ್ರದುರ್ಗದ ಹೊರವಲಯದ  ಕುಂಚಿಗನಾಳು ಬಳಿ ನಡೆದ ಕಾರು ಅಪಘಾತದಲ್ಲಿ   ನಟಿ ಶೋಭಾ ಸಾವನ್ನಪ್ಪಿದ್ದಾರೆ.
ಕನ್ನಡದ  ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶೋಭಾ ಪ್ರಸ್ತುತ ಟಿ.ಎನ್.ಸೀತಾರಾಮ ನಿರ್ದೇಶನದ ಮಗಳು ಜಾನಕಿಯಲ್ಲಿ ಪಾತ್ರ ನಿರ್ವಹಿಸುತ್ತಿದ್ದರು.ಬೆಂಗಳೂರಿನಿಂದ ಬದಾಮಿಯ ಬನಶಂಕರಿ ದೇವಸ್ಥಾನಕ್ಕೆ 6 ಜನರು ಇನ್ನೋವಾ ಕಾರಿನಲ್ಲಿ ಹೋಗುತ್ತಿರುವಾಗ ಚಿತ್ರದುರ್ಗ ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಕಾರಿನ ಮುಂದಿನ ಗಾಲಿ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಕಾರು ಡಿವೈಡರ್ ಹಾರಿ ಎದುರಿನ ರಸ್ತೆಗೆ ಬಿದ್ದಿದೆ. ಇದೇ ವೇಳೆ ಚಿತ್ರದುರ್ಗದಿಂದ ಹಿರೀಯೂರು ಕಡೆಗೆ ಹೋಗುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸೇರಿದಂತೆ ನಟಿ ಶೋಭಾ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಇನ್ನೂ ತನ್ನ ನೈಜ ಅಭಿನಯದ ಮೂಲಕವೇ ಪ್ರೇಕ್ಷಕರ ಮನ ಗೆದ್ದಿದ್ದ ಶೋಭಾ ನಿಜ ಜೀವನದಲ್ಲೂ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ಅಲ್ಲದೆ ಮಗಳು ಜಾನಕಿ ಧಾರಾವಾಹಿ ಸೇರಿದಂತೆ ಅನೇಕ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಶೋಭಾ ಅಭಿನಯಿಸಿದ್ದಾರೆ.ಸದ್ಯ ಈ ವಿಚಾರ ತಿಳಿದ ಮಗಳು ಜಾನಕಿ ಧಾರಾವಾಹಿ ನಿರ್ದೇಶಕ ಟಿ.ಎನ್ ಸೀತಾರಾಮ್ ಸದಾ ನಗುಮುಖದ, ಅಪಾರ ಪ್ರತಿಭೆಯ, ಸೌಜನ್ಯ ತುಂಬಿದ ಮಂಗಳಕ್ಕನ ಅನಿರೀಕ್ಷಿತ ಸಾವು ನನ್ನನ್ನು ದಿಗ್ಭ್ರಮೆಗೊಳಿಸಿದೆ ಎಂದು ದುಃಖದಿಂದ ಸಂತಾಪ ಸೂಚಿಸಿದ್ದಾರೆ.
ಜೊತೆಗೆ ನಟಿ ಶೋಭಾ ಅವರ ನಿಧನಕ್ಕೆ ‘ಮಗಳು ಜಾನಕಿ’ ಧಾರಾವಾಹಿ ತಂಡ ಮತ್ತು ಅಭಿಮಾನಿ ಬಳಗ ಸಹ ಸಂತಾಪ ಸೂಚಿಸಿದೆ.

Read These Next

ಭಟ್ಕಳ ಬೆಂಗ್ರೆಯಲ್ಲಿ ಕೊಳೆತು ಹೋಗುತ್ತಿರುವ ಭತ್ತದ ಸಶಿ; ದುಡಿಮೆಯ ಹಣವೆಲ್ಲ ಕೈ ಜಾರಿ ರೈತರು ಕಂಗಾಲು

ತಾಲೂಕಿನ ಮಳೆಯ ಸಂಕಷ್ಟಗಳು ನೆರೆ ಬಂದು ಹಿಂದಿರುಗಿದೊಡನೆ ಒಂದೊಂದಾಗಿ ಹೊರಗೆ ಬಂದು ಕಾಣಿಸಿಕೊಳ್ಳಲಾರಂಭಿಸಿವೆ. ಮಳೆಗಾಳಿಗೆ ಉರುಳಿ ...

ಪ್ರವಾಹ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ ರಾಜ್ಯಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್

ಕೃಷ್ಣಾ ನದಿಯಿಂದ ಬಂದ ಮಹಾಪ್ರವಾಹದಲ್ಲಿ ವಿವಿಧ ಗ್ರಾಮಗಳ ನಿರಾಶ್ರಿತರ ಶಿಬಿರಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ...

ನಮ್ಮಲ್ಲಿನ ಅಸಮತೆಯ ನಡುವೆಯೂ ಸಮಾಜ ಕಟ್ಟುವ ಕಾರ್ಯದಲ್ಲಿ ಒಂದಾಗಬೇಕು- ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು

ಕಾರವಾರ; ಎಲ್ಲ ಕಾಲದಲ್ಲೂ ಅಸಮಾನತೆ ಇದ್ದೇ ಇದೆ. ಐದು ಬೆರಳುಗಳು ಒಂದಕ್ಕೊಂದು ಸಮವಿಲ್ಲದಿದ್ದರೂ ಕೆಲಸ ಮಾಡುವಾಗ ಒಂದಾಗಿ ಕೆಲಸ ...