ದ.ಕ. ಜಿಲ್ಲೆಯ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿತ;ಮಣ್ಣಿನಡಿ ಇಬ್ಬರು ಸಿಲುಕಿರುವ ಶಂಕೆ

Source: sonews | By Staff Correspondent | Published on 5th July 2020, 6:11 PM | Coastal News | Don't Miss |

ಬಂಟ್ವಾಳ: ತಾಲೂಕಿನ ಗುರುಪುರ ಕೈಕಂಬದ ಬಂಗ್ಲಗುಡ್ಡೆ ಎಂಬಲ್ಲಿ ಗುಡ್ಡ ವೊಂದು ಕುಸಿದು ಬಿದ್ದಿದ್ದು ಇದರಿಂದಾಗಿ ಎರಡು ಮನೆಗಳು ಸಂಪೂರ್ಣವಾಗಿ ಕುಸಿದಿವೆ. ಮಣ್ಣಿನಡಿಯಲ್ಲಿ ಇಬ್ಬರು ಸಿಲುಕಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಬಂಗ್ಲಗುಡ್ಡೆಯಲ್ಲಿ ಮಧ್ಯಾಹ್ನದ ವೇಳೆಗೆ ಉಂಟಾದ ಗುಡ್ಡ ಕುಸಿತದಿಂದ ಮನೆಯೊಂದು ಧರೆಶಾಯಿಯಾಗಿದೆ. ಒಂದು‌ ಮನೆ ಕುಸಿತದ ಬಳಿಕ ಆ ಮನೆಯ ಮೇಲಿನ ಭಾಗದಲ್ಲಿ ಇದ್ದ ಮತ್ತೊಂದು‌ ಮನೆಯೂ ಕುಸಿದಿದೆ. ಮೊದಲು ಧರೆಶಾಯಿಯಾದ ಮನೆಯಲ್ಲಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 

ಕರಾವಳಿಯಲ್ಲಿ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದು ಪರಿಣಾಮ ಗುಡ್ಡಕುಸಿತ ಉಂಟಾಗಿದೆ. ಮೊದಲು ಕುಸಿತಗೊಂಡ ಮನೆ ಮಂದಿ ಮನೆ ಕುಸಿತಗೊಳ್ಳುತ್ತಿದ್ದಂತೆ ಹೊರ ಓಡಿದ್ದು ಆದರೆ ಮನೆಯಲ್ಲಿ‌ ಮಲಗಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಈ‌ ಮನೆಯ ಮೇಲಿನ ಭಾಗದಲ್ಲಿ ಇದ್ದ ಮನೆ ಮಂದಿಯೂ ಹೊರ ಓಡಿ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...