ಆ.17,18 ರಂದು ಮುಸ್ಲಿಮ್ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಕುರಿತ ಎರಡು ದಿನದ ರಾಜ್ಯಮಟ್ಟದ ಸಮಿನಾರ್ 

Source: sonews | By Staff Correspondent | Published on 15th August 2019, 11:10 PM | Coastal News | Don't Miss |

ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಟಿತ  ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಭಟ್ಕಳದ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಸಮಾರಂಭದ ವರ್ಷಾಚರಣೆಯ ಅಂಗವಾಗಿ ಆ.17 ಮತ್ತು 18 ರಂದು 'ಮುಸ್ಲಿಮ್ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳು ಸವಾಲುಗಳು ಮತ್ತುಪರಿಹಾರೋಪಾಯಗಳು' ಎಂಬ ವಿಷಯದಲ್ಲಿ  ಎರಡು ದಿನಗಳ ರಾಜ್ಯಮಟ್ಟದ ಸೆಮಿನಾರ್ ಅಂಜುಮನ್ ಇಂಜಿನೀಯರಿಂಗ್ ಕಾಲೇಜು ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ತಿಳಿಸಿದರು. 

ಅವರು ಗುರವಾರ ಅಂಜುಮನ್ ಅಡಳಿತ ಮಂಡಳಿ ಬ್ಲಾಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲಿದೀ ವಿಷಯ ತಿಳಿಸಿದರು. 
ಮುಸ್ಲಿಮ್ ಶಿಕ್ಷಣ ಸಂಸ್ಥೆಗಳು ಭವಿಷ್ಯದಲ್ಲಿ ಎದುರಿಸಬಹುದಾದ ಸವಾಲುಗಳನ್ನು ಸಮಿನಾರ್ ನಲ್ಲಿ ಮುಕ್ತವಾಗಿ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳುವಲ್ಲಿ ಈ ಸೆಮಿನಾರ್ ಸಹಾಯವಾಗುವುದು ಎಂದು ಅವರು ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ದೇಶದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳ ಶಿಕ್ಷಣ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು ಆ.17ರಂದು ಬೆಳಿಗ್ಗೆ 10.00ಗಂಟೆಗೆ ಉದ್ಘಾಟನೆಗೊಳ್ಳಲಿದ್ದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಹರಿಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರತಿಷ್ಟಿತ ಬ್ಯಾರಿ ಸಮೋಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸೈಯ್ಯದ್ ಮುಹಮ್ಮದ್ ಬ್ಯಾರಿ ಹಾಗೂ ಶಾಸಕ ಸುನಿಲ್ ನಾಯ್ಕ ಗೌರವ ಅತಿಥಿಯಾಗಿ ಉಪಸ್ಥಿತರಿರುವರು. ಆ.18 ರಂದು ಸಂಝೆ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉ.ಕ. ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮುಹಮ್ಮದ್ ರೋಷನ್ ಮುಖ್ಯ ಅತಿಥಿಯಾಗಲಿದ್ದು, ದೆಹಲಿಯ ಸೆಂಟರ್ ಫಾರ್ ರೀಸರ್ಚ & ಡಿಬೆಟ್ಸ್ ಇನ್ ಡೆವಲಪ್ಮೆಂಟ್ ಪಾಲಿಸಿ ಯ ಅಧ್ಯಕ್ಷ ಡಾ.ಅಬುಸಾಲೆಹ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಎರಡು ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ವಹಿಸಲಿದ್ದಾರೆ. 

ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಸ್ಕಿಲ್ ಮಿಷನ್ ನಿರ್ದೇಶಕ ಎಸ್.ಎ ಅಶ್ರಫ್ ಹಸನ್, ಪ್ರೇಮಿಜಿ ವಿಶ್ವವಿದ್ಯಾಲಯದ ಶೈಕ್ಷಣಿಕ ತಂತ್ರಜ್ಞ ಮುಜಾಹಿದ್ದುಲ್ ಇಸ್ಲಾಮ್, ಬ್ರೇನಿ ಸ್ಟಾರ್ ಶಿಕ್ಷಣ ಫೌಂಡೇಶನ್ ಸಿಇಒ ಸೈಯ್ಯದ್ ತನ್ವೀರ್ ಆಹ್ಮದ್, ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಎಂ.ಎ.ಬಾಸಿತ್, ಎನ್.ಸಿ.ಆರ್.ಟಿ ಸಲಹಾ ಬೋರ್ಡ ಸದಸ್ಯ ಮುಹಮ್ಮದ್ ಸಯೀದುಲ್ಲಾ ಷರೀಫ್,  ಶಾಹೀನ್ ಸಮೋಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಕದೀರ್ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಟಿಯಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದೀಖ್, ಕಾರ್ಯದರ್ಶಿ ಮೊಹಸಿನ್ ಶಾಬಂದ್ರಿ, ಶತಮಾನೋತ್ಸವ ಸಮಾರಂಭದ ಸಂಚಾಲಕ ಅಬ್ದುಲ್ ರಖೀಬ್ ಎಂ.ಜೆ, ಸೆಮಿನಾರ್ ಸಂಚಾಲಕ ಪ್ರೋ ಮುಸ್ತಾಖ್ ಆಹ್ಮದ್ ಭಾವಿಕಟ್ಟಿ, ಮ್ಯಾಕಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಫಝಲುರ್ರಹ್ಮಾನ್, ಎಲೆಕ್ಟ್ರಾನಿಕ್ & ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಟಿ.ಎಂ.ಪಿ. ರಾಜಕುಮಾರ್, ಎಂ.ಬಿ.ಅ ವಿಭಾಗದ ಮುಖ್ಯಸ್ಥೆ ಪ್ರೋ.ಝಾಹಿದ್ ಹಸನ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...