ಕಡಬದ ಗುಂಡ್ಯ ಹೊಳೆಯಲ್ಲಿ ಮುಳುಗಿ ಇಬ್ಬರ ಮೃತ್ಯು.

Source: VB | By Laxmi Tanaya | Published on 19th April 2021, 11:01 PM | Coastal News | Don't Miss |

ಕಡಬ :  ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆಂದು ನೀರಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.

ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ರವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ. ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದಾರೆ ಎನ್ನಲಾಗಿದೆ. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ.

 ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...