ಗೋಕರ್ಣ ತದಡಿ ಬೀಚ್‌ನಲ್ಲಿ ಈಜಲು ಹೋಗಿ ಮುಳುಗಿದ ತಾಯಿ-ಮಗ ಅಸ್ವಸ್ಥ

Source: S.O. News Service | By MV Bhatkal | Published on 4th December 2022, 8:00 PM | Coastal News | Don't Miss |

ಗೋಕರ್ಣ: ಕುಮಟಾ ತಾಲೂಕಿನ ಗೋಕರ್ಣದ ತದಡಿ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಮುಳುಗಿ ತಾಯಿ ಹಾಗೂ ಮಗು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಬಾನಾ ಶೇಖ್ (28), ಮುಹಮ್ಮದ್ ರಜಾಕ್ (6) ಅಸ್ವಸ್ಥಗೊಂಡವರಾಗಿದ್ದಾರೆ. ಇವರು ಭಟ್ಕಳ ಮೂಲದವರಾಗಿದ್ದಾರೆ. ಗೋಕರ್ಣದ ತದಡಿಯ ಮುರಾದ್ ಅಹ್ಮದ್ ಎಂಬುವವರ ಮನೆಗೆ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ಈ ವೇಳೆ ತದಡಿ ಕಡಲತೀರದಲ್ಲಿ ಈಜಲು ತೆರಳಿದ್ದರು.

ಈಜುತ್ತಿದ್ದಾಗ ಅಲೆಗಳು ಅಬ್ಬರಿಸಿವೆ. ಇದರಿಂದಾಗಿ ತಾಯಿ ಮತ್ತು ಮಗನಿಗೆ ಅಲೆಗಳ ನಡುವೆ ಈಜಲು ಕಷ್ಟವಾಗಿದೆ. ಹೀಗಾಗಿ ಮುಳುಗುವ ಹಂತ ತಲುಪಿದ್ದರು. ಆಗ ಇಬ್ಬರೂ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಬೋಟ್ ಸಿಬ್ಬಂದಿಯು ರಕ್ಷಣೆಗೆ ದಾವಿಸಿದ್ದು, ಮುಳುಗುತ್ತಿದ್ದವರನ್ನು ರಕ್ಷಣೆ ಮಾಡಿದ್ದಾರೆ.

ಅಸ್ವಸ್ಥಗೊಂಡವರನ್ನು ಕೂಡಲೇ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದ್ದು, ಪ್ರಥಮ ಚಿಕಿತ್ಸೆ ಕೊಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಭೇಟಿ ನೀಡಿ ಮಾಹಿತಿಯನ್ನು ಕಲೆಹಾಕಿದ್ದಾರೆ.

Read These Next

ಬೆಂಗಳೂರು ಚಲೋ ಪೂರ್ವಭಾವಿ ಸಭೆ: ಅರಣ್ಯವಾಸಿಗಳ ಮೇಲೆ ದೌರ್ಜನ್ಯ ನಿಲ್ಲಿಸಿ. ರವೀಂದ್ರ ನಾಯ್ಕ

ಅರಣ್ಯವಾಸಿಗಳ ಮೇಲೆ ಕಾನೂನುಬಾಹೀರ ದೌರ್ಜನ್ಯ ಮತ್ತು ಕಿರುಕುಳ ನೀಡುವುದನ್ನು ನಿಯಂತ್ರಿಸಿ ಇಲ್ಲದಿದ್ದರೆ ಜಿಲ್ಲಾದ್ಯಂತ ಅರಣ್ಯ ...

ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಜಿಲ್ಲಾಡಳಿತದಿಂದ ಪ್ರಾಮಾಣಿಕ ಪ್ರಯತ್ನ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಮಂಡ್ಯ : ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಡಳಿತದಿಂದ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ...

ಸಂಚಾರಿ ನಿಯಮ ಉಲ್ಲಂಘನೆ ದಂಡದ ರಿಯಾಯಿತಿ ಪ್ರಯೋಜನ ಪಡೆದು, ಸಂಚಾರಿ ನಿಯಮ ಪಾಲಿಸಿ : ಪ್ರಧಾನ ನ್ಯಾಯಾಧೀಶೆ ಕೆ.ಜಿ. ಶಾಂತಿ

ಧಾರವಾಡ : ಭಾರತೀಯ ಕಾನೂನಿನ ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರಗಳು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ...

ವಿಧಾನಸಭಾ ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಕ್ರಮ. ಜಾಗೃತಿ ಕಾರ್ಯಕ್ರಮಗಳ ಮತದಾನ ಮಹತ್ವ ಸಾರಲು ಕ್ರಿಯಾ ಯೋಜನೆ ತಯಾರಿಸಿ :ಜಿ.ಪಂ. ಸಿಇಓ ಡಾ.ಸುರೇಶ ಇಟ್ನಾಳ.

ಧಾರವಾಡ. : ಬರುವ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಶೇ.100 ರಷ್ಟು ಮತದಾನವಾಗಬೇಕು. ಮತದಾರ ಜಾಗೃತಿಗಾಗಿ ...