ಕಿತ್ತೂರು ಚೆನ್ನಮ್ಮ ವಸತಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕಟ್ಟೀಮನಿ ಪ್ರತಿಷ್ಟಾನ ಪುರಸ್ಕಾರ

Source: sonews | By Staff Correspondent | Published on 10th November 2019, 11:57 PM | Coastal News |

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರು ಹಾಗೂ ಸಂಯುಕ್ತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ತಾಲೂಕಿನ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕಟ್ಟೀಮನಿ ಪ್ರತಿಷ್ಟಾನ ಪುರಸ್ಕಾರ ನೀಡಿ ಗೌರವಿಸಲಾಯಿತು. 

ವಿಜ್ಞಾನ ಶಿಕ್ಷಕ ವಿಜಯ ಮೊಗೇರ, ಗಣಿತ ಶಿಕ್ಷಕ ಗುರುರಾಜ ನಾಯ್ಕ ಇವರು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿ ಕಳೆದ ೨೦೧೯ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಮ್ಮ ವಿಷಯದಲ್ಲಿ ಶೇ.೧೦೦ ಫಲಿತಾಂಶ ಪಡೆದಿದ್ದಲ್ಲದೇ ತಾಲೂಕಿನಲ್ಲಿಯೇ ವಿದ್ಯಾರ್ಥಿಗಳು ಅತಿ ಹೆಚ್ಚು ಸರಾಸರಿ ಅಂಕಗಳನ್ನು ಗಳಿಸುವಲ್ಲಿ ಕೂಡಾ ಯಶಸ್ವೀಯಾಗಿದ್ದನ್ನು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  ಪ್ರಶಸ್ತಿ ಪುರಸ್ಕಾರವನ್ನು ಮಾಜಿ ಶಿಕ್ಷಣ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗ ಆಯಕ್ತರು ಪ್ರಧಾನ ಮಾಡಿದರು. 
 

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...