ಗೋವಾ ಪ್ರವೇಶಕ್ಕೆ ಎರಡು ಸಾವಿರ. ಕರ್ನಾಟಕ-ಗೋವಾ ಗಡಿಯಲ್ಲಿ ಪ್ರತಿಭಟನೆ.

Source: SO News | By Laxmi Tanaya | Published on 29th August 2020, 1:05 PM | Coastal News | State News | Don't Miss |

ಕಾರವಾರ : ಗೋವಾ ಗಡಿಯನ್ನ ಪ್ರವೇಶ ಮುಕ್ತ ಮಾಡಬೇಕೆಂದು ಆಗ್ರಹಿಸಿ ಇಂದು ಮಾಜಾಳಿ ಚೆಕ್ ಪೋಸ್ಟ್ ಬಳಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. 


ವಾಟಾಳ್ ಪಕ್ಷ, ಕನ್ನಡ ರಕ್ಷಣಾ ವೇದಿಕೆ, ಟ್ಯಾಕ್ಸಿ ಯುನಿಯನ್ ಸೇರಿ ವಿವಿಧ ಸಂಘಟನೆ ನೇತೃತ್ವದಲ್ಲಿ ಕರ್ನಾಟಕ ಮತ್ತು ಗೋವಾ ಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ಪ್ರತಿಭಟಿಸಿದ ಕಾರ್ಯಕರ್ತರು ಗೋವಾ ಸರ್ಕಾರದ ನಿಲುವಿಗೆ ಆಕ್ರೋಶ ವ್ಯಕ್ತಪಡಿಸಿದ್ರು. 

ಕೋವಿಡ್ 19 ನಿಂದಾಗಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನ ಮಾರ್ಗಸೂಚಿಯಂತೆ ತೆಗೆದು ಹಾಕಲಾಗಿದೆ. ಆದ್ರೆ ಗೋವಾ ಸರ್ಕಾರ ಕರ್ನಾಟಕದಿಂದ ಪ್ರವೇಶಿಸುವ ಜನರಿಗೆ 2 ಸಾವಿರ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ವಿನಾಕಾರಣ ವಸೂಲಿ ಮಾಡುತ್ತಿದೆ ಎಂದರು. 

ಹೀಗಾಗಿ ಕೂಡಲೆ ಗೋವಾಕ್ಕೆ ತೆರಳಲು ಪ್ರವೇಶ ಮುಕ್ತಮಾಡಬೇಕು. ಇಲ್ಲದಿದ್ದಲ್ಲಿ ಸಪ್ಟೆಂಬರ್ 5ರಂದು ಪುನಃ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಅಲ್ಲದೇ ಗೋವಾದಿಂದ ಕರ್ನಾಟಕ ಪ್ರವೇಶಿಸುವ ವಾಹನಗಳನ್ನ ಗಡಿಯಲ್ಲಿ ತಡೆದು ವಾಪಾಸ್ ಕಳಿಸುತ್ತೆವೆಂದು ಹೇಳಿದ್ದಾರೆ.
ಈ ಬಗ್ಗೆ ಗೋವಾ ಕಾಣಕೋಣದ ಡೆಪ್ಯುಟಿ ಕಲೆಕ್ಟರ್ ರಾಜೇಶ ಪ್ರಭು ಅವರಿಗೆ ಮನವಿ ಸಲ್ಲಿಸಿದರು. 
ಪ್ರತಿಭಟನೆಯಿಂದಾಗಿ ಗಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...