ಉಡುಪಿ: ಜಿಲ್ಲೆಯಲ್ಲಿ 160 ಮಂದಿಗೆ ಕೋವಿಡ್‌ ಸೋಂಕು

Source: Prajavani | Published on 24th July 2020, 12:14 AM | Coastal News | Don't Miss |

 

 

 


ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲೇ ಇದ್ದು ಗುರುವಾರ 160 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 87, ಕುಂದಾಪುರದ 60, ಕಾರ್ಕಳದ 13 ಸೋಂಕು ಪತ್ತೆಯಾಗಿದೆ.
ಮುಂಬೈನಿಂದ ಬಂದಿದ್ದ 6 ಮಂದಿಯಲ್ಲಿ, ಬೆಂಗಳೂರು ಪ್ರಯಾಣ ಹಿನ್ನೆಲೆಯ ಇಬ್ಬರು, ಪುಣೆ, ಮಂಗಳೂರು ಪ್ರಯಾಣ ಹಿನ್ನೆಲೆಯ ಇಬ್ಬರಲ್ಲಿ ಹಾಗೂ ಶೀತಜ್ವರ ಲಕ್ಷಣಗಳಿದ್ದ 42, ತೀವ್ರ ಉಸಿರಾಟದ ಸಮಸ್ಯೆ ಇದ್ದ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಂಕಿತರಲ್ಲಿ 87 ಪುರುಷರು, 59 ಮಹಿಳೆಯರು 14 ಮಕ್ಕಳು ಇದ್ದಾರೆ. ಅಗತ್ಯವಿದ್ದವರಿಗೆ ಕೋವಿಡ್‌ ಆಸ್ಪತ್ರೆಗಳಲ್ಲಿ, ರೋಗದ ಲಕ್ಷಣಗಳಿಲ್ಲದ 448 ಸೋಂಕಿತರನ್ನು ಹೋಂ ಐಸೊಲೇಷನ್‌ನಲ್ಲಿರಿಸಲಾಗಿದೆ.
622 ಮಾದರಿ ಸಂಗ್ರಹ: ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 622 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಗುರುವಾರ 276 ವರದಿಗಳು ನೆಗೆಟಿವ್ ಬಂದಿದ್ದು, 160 ಪಾಸಿಟಿವ್ ಬಂದಿವೆ. 653 ವರದಿಗಳು ಬರುವುದು ಬಾಕಿ ಇದೆ. 
ಸೋಂಕಿನ ಲಕ್ಷಣಗಳು ಕಂಡುಬಂದ 45 ಮಂದಿಗೆ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ 65 ಸೇರಿ ಜಿಲ್ಲೆಯಲ್ಲಿ ಇದುವರೆಗೂ 1,841 ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ 994 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಸಂಖ್ಯೆ 2,846ಕ್ಕೇರಿಕೆಯಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...