ಉಡುಪಿ: ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಇಲ್ಲ; ಸರಕಾರಿ ಬಾಲಕಿಯರ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಿರ್ಣಯ

Source: VB | By I.G. Bhatkali | Published on 2nd January 2022, 8:02 AM | Coastal News |

ಉಡುಪಿ: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿ ಹಾಜರಾಗಲು ಅವಕಾಶ ನೀಡದಿರುವ ಕುರಿತು ನಿರ್ಣಯಿಸಲಾಯಿತು.

ಈ ಬಗ್ಗೆ ಪತ್ರಿಕೆ ಜೊತೆ ಮಾತನಾಡಿದ ಕಾಲೇಜು ಪ್ರಾಂಶುಪಾಲ ರುದ್ರೇಗೌಡ, ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಹಿಂದಿನಂತೆ ಯಥಾಸ್ಥಿತಿ ಕಾಪಾಡಲಾಗುವುದು. ಅದರಂತೆ ಹಿಜಾಬ್ ಧರಿಸಲು ಈವರೆಗೆ ಅವಕಾಶ ಇರಲಿಲ್ಲ. ಇನ್ನು ಮುಂದೆ ಕೂಡ ಇರುವುದಿಲ್ಲ ಎಂಬ ಒಮ್ಮತದ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ಕಾಲೇಜಿನಲ್ಲಿ ಹೊಸದಾಗಿ ಯಾವುದೇ ರೀತಿಯ ಡ್ರೆಸ್ ಕೋಡ್‌ಗೆ ಅವಕಾಶ ನೀಡುವುದಿಲ್ಲ. ಪೋಷಕರು ಆ ನಿರ್ಣಯಕ್ಕೆ ಬದ್ಧರಾಗಿ ಹೋಗಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು,

ನಗರಸಭೆ ಸದಸ್ಯರು, ಪೊಲೀಸ್ ಅಧಿಕಾರಿಗಳು, ಪೋಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಹಿಜಾಬ್ ಧರಿಸಿದ ಕಾರಣಕ್ಕಾಗಿ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಎಂಟು ಮಂದಿ ವಿದ್ಯಾರ್ಥಿನಿಯರಿಗೆ ಐದು ದಿನಗಳಿಂದ ತರಗತಿ ಪ್ರವೇಶ ನಿರಾಕರಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿನಿಯರು ಕಾಲೇಜಿನ ಹೊರಗಡೆ ನಿಲ್ಲುತ್ತಿದ್ದಾರೆ. ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...