ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ವ್ಯಸನಿಗಳಿಗೆ ಆಪ್ತ ಸಮಾಲೋಚನೆ

Source: SO News | By Laxmi Tanaya | Published on 16th July 2023, 10:55 PM | Coastal News | Don't Miss |

ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಣಗುಡ್ಡೆ ಎ.ವಿ ಬಾಳಿಗಾ ಆಸ್ಪತ್ರೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾದ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಭಾಗಿಯಾದ ಸುಮಾರು 100 ರಿಂದ 200 ಮಾದಕ ವ್ಯಸನಕ್ಕೆ ಒಳಗಾದ ಯುವಕರು ಮತ್ತು ಅವರ ಪೋಷಕರಿಗೆ ಒಂದು ದಿನದ ಆಪ್ತ ಸಮಾಲೋಚನ ಕಾರ್ಯಕ್ರಮವನ್ನು ಉಡುಪಿ ನಗರದ ಡಾ| ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ದೊಡ್ಡಣಗುಡ್ಡೆಯಲ್ಲಿ ಆಯೋಜಿಸಲಾಗಿತ್ತು.

ಆಸ್ಪತ್ರೆಯ ಮಾನಸಿಕ ತಜ್ಞ ಹಾಗೂ ನಿರ್ದೆಶಕರಾದ ಡಾ| ಪಿ.ವಿ ಭಂಡಾರಿ ಮತ್ತು ಡಾ|ವಿರೂಪಾಕ್ಷ ದೇವರಮನಿರವರು ದುಷ್ಚಟಗಳಾದ ಮದ್ಯಪಾನ, ಧೂಮಪಾನ ಹಾಗೂ ಮಾದಕವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಉಡುಪಿ ಬಸ್ ನಿಲ್ದಾಣದ ಬಳಿ, ಅಂಬಲಪಾಡಿಯ ದೇವಸ್ಥಾನದಲ್ಲಿ ಪ್ರತೀ ಭಾನುವಾರ ದುಶ್ಚಟಗಳಿಗೆ ಒಳಗಾದ ವ್ಯಕ್ತಿಗಳಿಗೆ ವ್ಯಸನಗಳಿಂದ ಹೊರ ಬರಲು ಉಚಿತವಾಗಿ ಆಪ್ತ ಸಮಾಲೋಚನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.
 ಪೊಲೀಸ್ ಇಲಾಖೆ ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಉಡುಪಿ ಜಿಲ್ಲೆಯನ್ನು ವ್ಯಸನ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸಲು ಜಿಲ್ಲಾ ಎಸ್ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ರವರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಗಾರದಲ್ಲಿ ಉಡುಪಿ ಸೆನ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಂಜುನಾಥ್ , ಮಣಿಪಾಲ ಠಾಣೆಯ ನಿರೀಕ್ಷಕರಾದ ದೇವರಾಜ್ ಟಿ.ವಿ ಸೇರಿದಂತೆ ಉಡುಪಿ , ಬ್ರಹ್ಮಾವರ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಬಾಳಿಗಾ ಆಸ್ಪತ್ರೆಯ ಸಿಬ್ಬಂದಿಯವರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು .

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...