ಉಡುಪಿ: ನೇಜಾರು ತಾಯಿ ಮಕ್ಕಳ ಕಗ್ಗೋಲೆ ಪ್ರಕರಣ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

Source: Vb | By I.G. Bhatkali | Published on 16th December 2023, 3:53 AM | Coastal News |

ಉಡುಪಿ: ನೇಜಾರು ನಾಲ್ವರ ಕಗ್ಗೋಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ ಚೌಗುಲೆಯ ಸ್ಥಳ ತನಿಖೆ ಸಂದರ್ಭ ಅಕ್ರಮ ಕೂಟ ಸೇರಿಕೊಂಡು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನ.16ರಂದು ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಕೃತ್ಯ ನಡೆದ ಸ್ಥಳದಲ್ಲಿ ತನಿಖೆಗಾಗಿ ಕರೆದುಕೊಂಡು ಬಂದಿದ್ದು, ತನಿಖೆ ಪ್ರಕ್ರಿಯೆ ಮುಗಿಸಿ ವಾಪಸು ಆರೋಪಿಯನ್ನು ಇಲಾಖಾ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸುಮಾರು 30 ರಿಂದ 40 ಮಂದಿ ಅಕ್ರಮ ಕೂಟ ಸೇರಿಕೊಂಡು ಇಲಾಖಾ ವಾಹನ ವನ್ನು ಅಡ್ಡ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ : 143, 147, 341, 186 33 149 ಐಪಿಸಿಯಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು.

ಇದನ್ನು ಪ್ರಶ್ನಿಸಿ ಎಪಿಸಿಆರ್‌ನ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮುಹಮ್ಮದ್ ನಿಯಾಝ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...