ಉಕ್ಕಿ ಹರಿಯುತ್ತಿರುವ ಉಡುಪಿಯ ಬಜೆ ಡ್ಯಾಂ;ಪಂಪಿಂಗ್ ಕಾರ್ಯ ಸ್ಥಗಿತ

Source: sonews | By Staff Correspondent | Published on 20th September 2020, 5:19 PM | Coastal News | Don't Miss |

ಹಿರಿಯಡ್ಕ: ಉಡುಪಿ ನಗರಸಭೆಗೆ ನೀರು ಪೂರೈಕೆ ಮಾಡುವ ಬಜೆ ಡ್ಯಾಂ ಪ್ರದೇಶದಲ್ಲಿ ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಬೆಳಗಿನ ಜಾವ 4.30ರ ಸುಮಾರಿಗೆ ಪಂಪ್ ಹೌಸ್‌ಗೆ ನೀರು ನುಗ್ಗಿದ ಪರಿಣಾಮ ಪಂಪಿಂಗ್ ಕಾರ್ಯ ಸ್ಥಗಿತಗೊಳಿಸಲಾಗಿದೆ.

ಬಜೆ ಡ್ಯಾಂನ ಸಾಮರ್ಥ್ಯ 4.9 ಮೀಟರ್ ಆಗಿದೆ. ಆದರೆ ಮೊದಲ ಬಾರಿ ಎಂಬಂತೆ ಭಾರೀ ಮಳೆಯಿಂದಾಗಿ ಬಜೆ ಡ್ಯಾಂನಲ್ಲಿ 10.5 ಮೀಟರ್ ನೀರಿನ ಮಟ್ಟ ಏರಿಕೆಯಾಗಿ ಉಕ್ಕಿ ಹರಿಯುತ್ತಿದೆ. ಅಲ್ಲದೆ ಅಲ್ಲೇ ಸಮೀಪದಲ್ಲಿ 9.5 ಮೀಟರ್ ಎತ್ತರದಲ್ಲಿರುವ ಪಂಪ್ ಹೌಸ್‌ಗೂ ನೀರು ನುಗ್ಗಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 4.55ರಿಂದ ಪಂಪಿಂಗ್ ಕಾರ್ಯ ನಿಲ್ಲಿಸಲಾಗಿದೆ. ಇದರಿಂದ ಸದ್ಯ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ.

ನೀರಿನ ಮಟ್ಟಕ್ಕೆ 9 ಮೀಟರ್ ಇಳಿದ ಕೂಡಲೇ ಮೆಸ್ಕಾಂ ಅವರಿಂದ ಪರಿಶೀಲನೆ ನಡೆಸಿ ನಂತರ ಪಂಪ್ ಕಾರ್ಯ ಆರಂಭಿಸಲಾಗುವುದು. ಇಲ್ಲದಿದ್ದರೆ ತಾಂತ್ರಿಕ ಸಮಸ್ಯೆಯಿಂದ ಪಂಪ್ ಸುಟ್ಟು ಹೋಗುವ ಸಾಧ್ಯತೆಗಳಿವೆ ಎಂದು ಉಡುಪಿ ನಗರಸಭೆಯ ಕಾರ್ಯಪಾಲಕ ಇಂಜಿನಿಯರ್ ಮೋಹನ್ ರಾಜ್ ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...