ದೇಶದಲ್ಲಿ  ನಡೆದ ಬಾಂಬ್ ಸ್ಫೋಟಗಳ ಹಿಂದೆ ಆರೆಸ್ಸೆಸ್ 

Source: sonews | By Staff Correspondent | Published on 4th March 2018, 11:36 PM | Coastal News | State News | National News | Don't Miss |

ಉಡುಪಿ: ದೇಶದ ವಿವಿಧ ಭಾಗಗಳಲ್ಲಿ ನಡೆದಿರುವ ಬಾಂಬ್ ಸ್ಫೋಟಗಳ ಹಿಂದೆ ಆರೆಸ್ಸೆಸ್ ಕೈವಾಡ ಇದೆ. ಇವುಗಳ ಬಗ್ಗೆ ಸಮಗ್ರ ತನಿಖೆ ನಡೆದರೆ ಮೋದಿ ಪಾತ್ರದ ಬಗ್ಗೆ ಸತ್ಯ ಹೊರಬರಲಿದೆ ಎಂದು ಮೌಲಾನಾ ತೌಖೀರ್ ರಝಾ ಖಾನ್ ಹೇಳಿದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ವತಿಯಿಂದ ನಗರದ ಬೀಡಿನಗುಡ್ಡೆಯ ಮಾಹಾತ್ಮಗಾಂಧಿ ಮೈದಾನದಲ್ಲಿ ನಡೆದ ‘ದೇಶ ನಿರ್ಮಾಣಕ್ಕಾಗಿ ಸಮುದಾಯದ ಸಬಲೀಕರಣ’ ಏಕತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶವನ್ನೇ ಬೆಚ್ಚಿ ಬೀಳಿಸಿದ ಮುಂಬೈ ದಾಳಿಗೆ ಸಂಬಂಧಿಸಿ ಮಾತನಾಡಿದ ಅವರು ಮುಂಬೈ ದಾಳಿ ನಡೆಸಲು ಆತಂಕವಾದಿಗಳು ಬಂದಿರಲಿಲ್ಲ. ಬದಲಾಗಿ ಅವರನ್ನು ಆಹ್ವಾನಿಸಲಾಗಿತ್ತು. ಈ ಮೂಲಕ ಹೇಮಂತ್ ಕರ್ಕೆರೆ ಸಹಿತ ಅವರ ತಂಡದ ಕೆಲವರನ್ನು ಹತ್ಯೆ ಮಾಡಲಾಗಿತ್ತು. ಈ ಆತಂಕವಾದಿಗಳು ಗುಜರಾತ್‌ನಿಂದ ಮುಂಬೈ ಪ್ರವೇಶಿಸಿದ್ದರು ಎಂದು ಹೇಳಿದರು.

 

ದೇಶದಲ್ಲಿ ಮುಸ್ಲಿಮರ ಸಮಸ್ಯೆಗಳು ಬಗೆಹರಿಯಬೇಕಾದರೆ ಸಕ್ರಿಯ ರಾಜಕೀಯ ಪ್ರಾತಿನಿಧ್ಯ ಅಗತ್ಯವಾಗಿದೆ ಎಂದು ಇತ್ತಿಹಾದೇ ಮಿಲ್ಲತ್ ಕೌನ್ಸಿಲ್‌ನ ಅಧ್ಯಕ್ಷ ಹಾಗೂ ಅಹ್ಲೆ ಸುನ್ನತ್ ವಲ್ ಜಮಾಅತ್‌ನ ಖ್ಯಾತ ವಿದ್ವಾಂಸ ಮೌಲಾನಾ ಅಹ್ಮದ್ ರಝಾ ಖಾನ್‌ರವರ ಮೊಮ್ಮಗ ಮೌಲಾನಾ ತೌಖೀರ್ ರಝಾ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಮುಸ್ಲಿಮರು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವ ಮೊದಲು ಸಕ್ರಿಯ ರಾಜಕೀಯದಲ್ಲಿ ಸಮುದಾಯದ ಪಾಲುದಾರಿಕೆಯ ಬೇಡಿಕೆಯನ್ನು ಆ ಪಕ್ಷದ ಮುಂದಿಡಬೇಕು. ಮುಸ್ಲಿಮರ ಬೇಡಿಕೆಗಳನ್ನು ಆ ಪಕ್ಷ ಬಗೆಹರಿಸಲು ಸಿದ್ಧವಿರುವುದಾದರೆ ಬೆಂಬಲಿಸಬಹುದು. ಈ ಮೂಲಕ ಮುಸ್ಲಿಮರು ತಮ್ಮ ಮೇಲಿನ ಸಂಕಷ್ಟ ಹಾಗೂ ಅನ್ಯಾಯಗಳ ವಿರುದ್ಧ ಧ್ವನಿ ಎತ್ತಲು ಸಾಧ್ಯವಿದೆ ಎಂದರು.

ಬೆಂಬಲಿತ ರಾಜಕೀಯ ಪಕ್ಷದೊಂದಿಗೆ ಮುಸ್ಲಿಮರು ಪ್ರಬಲ ಶಕ್ತಿಯಾಗಿ ಮೂಡಿಬರಬೇಕು. ರಾಜಕೀಯ ಪಕ್ಷದಲ್ಲಿ ಕೇವಲ ಗುಲಾಮಗಿರಿಯ ಕೆಲಸವನ್ನು ಮಾಡಿಕೊಂಡಿರದೆ, ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಸಮುದಾಯಕ್ಕೆ ಅವರು ಕರೆ ನೀಡಿದರು.

ದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ಪ್ರಸ್ತುತ ಸನ್ನಿವೇಶವನ್ನು ಉಲ್ಲೇಖಿಸಿ ಮಾತನಾಡಿದ ಮೌಲಾನಾ ತೌಖೀರ್ ರಝಾ ಖಾನ್ ಅವರು, ಇಂತಹ ಅಪಾಯವನ್ನು ಎದುರಿಸಲು ಮುಸ್ಲಿಮರು ಏಕತೆಯನ್ನು ಪ್ರದರ್ಶಿಸುವುದು ಅನಿವಾರ್ಯವಾಗಿದೆ. ಸಮುದಾಯದ ಮೇಲಿನ ಕಾಳಜಿ, ಅನುಕಂಪ ಪ್ರಸಕ್ತ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮುಸ್ಲಿಮರ ಐಕ್ಯತೆಗಾಗಿ ಶ್ರಮಿಸುತ್ತಿರುವ ಸಂಘಟನೆಗಳನ್ನು ಬೆಂಬಲಿಸುವ ಮೂಲಕ ಭಿನ್ನತೆಯಲ್ಲೂ ಏಕತೆಯನ್ನು ಪ್ರದರ್ಶಿಸಬೇಕಾದ ಆವಶ್ಯಕತೆ ಇದೆ ಎಂದವರು ಒತ್ತಿ ಹೇಳಿದರು.

ಪದೇ ಪದೇ ಮುಸ್ಲಿಮರ ದೇಶ ಪ್ರೇಮವನ್ನು ಪ್ರಶ್ನಿಸಲಾಗುತ್ತಿದೆ. ಮುಸ್ಲಿಮರ ವಿರುದ್ಧ ದ್ವೇಷದ ಭಾವನೆಗಳನ್ನು ಬಿತ್ತಲಾಗುತ್ತಿದೆ. ಇದರಿಂದ ಮುಸ್ಲಿಮರು ವಿಚಲಿತರಾಗಬೇಕಾಗಿಲ್ಲ. ಆತಂಕ ಪಡಬೇಕಾಗಿಲ್ಲ. ನೈಜ ಮುಸಲ್ಮಾನ ಎಂದೂ ದೇಶಭ್ರಷ್ಟನಾಗಲಾರ. ಆದ್ದರಿಂದ ಮುಸ್ಲಿಮರು ಈ ದೇಶದ ಶತ್ರುಗಳಾಗಿರದೆ, ಮುಸ್ಲಿಮರನ್ನು ಕೆರಳಿಸುವ, ಉದ್ರೇಕಕಾರಿ ಭಾಷಣ ಮಾಡಿ ದ್ವೇಷ ಬಿತ್ತುವ ಮೂಲಕ ಅಪಾಯ ತಂದೊಡ್ಡುವವರೇ ದೇಶದ ನಿಜವಾದ ಶತ್ರುಗಳು ಎಂದು ಅವರು ನುಡಿದರು.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...