ಉಕ್ರೇನ್: ದಾಳಿಗೆ ರಾಜ್ಯದ ವಿದ್ಯಾರ್ಥಿ ಬಲಿ; ಹಾವೇರಿ ಜಿಲ್ಲೆಯ ನವೀನ್ ಮೃತ ವಿದ್ಯಾರ್ಥಿ, ಖಾರ್ಕಿವ್ ನಗರದಲ್ಲಿ ರಶ್ಯ ಸೇನೆಯಿಂದ ಶೆಲ್ ದಾಳಿ

Source: Vb | By I.G. Bhatkali | Published on 3rd March 2022, 10:43 AM | State News | National News | Global News |

ಹೊಸದಿಲ್ಲಿ: ಭೀಕರ ಯುದ್ಧಕ್ಕೆ ಸಾಕ್ಷಿಯಾಗಿರುವ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ಸೋಮವಾರ ಬೆಳಗ್ಗೆ ರಶ್ಯದ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ನವೀನ್ ಗ್ಯಾನಗೌಡರ್ (21) ಎಂದು ಗುರುತಿಸಲಾಗಿದೆ.

ಅವರು ಉಕ್ರೇನ್‌ನಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದರು. ರಶ್ಯದ ಯೋಧರು ಸರಕಾರಿ ಕಟ್ಟಡವನ್ನು ಸ್ಫೋಟಿಸಿದ ಸಂದರ್ಭದಲ್ಲಿ ನವೀನ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ. ನವೀನ್ ಅವರು ಉಕ್ರೇನ್‌ನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕಿವ್ ಗವರ್ನರ್ ಭವನದ ಸಮೀಪದ ಕಟ್ಟಡದಲ್ಲಿ ವಾಸಿಸುತ್ತಿದ್ದರು. ರಶ್ಯ ಸೇನೆ ಶೆಲ್ ದಾಳಿ ನಡೆಸಿದ ಸಂದರ್ಭ ಅವರು ಪಡಿತರ ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು. ಆಗ ರಷ್ಯದ ಪಡೆಗಳು ಹಠಾತ್ತನೆ ಗವರ್ನರ್ ಭವನದ ಮೇಲೆ ಶೆಲ್ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ನವೀನ್ ಸಾವನಪಿದ್ದರು' ಎಂದು ಖಾರ್ಕಿವ್ ನಗರದ ವಿದ್ಯಾರ್ಥಿ ಸಮನ್ವಯಗಾರ್ತಿ ಪೂಜಾ ಪ್ರಹರಾಜ್ ತಿಳಿಸಿದ್ದಾರೆ.

ಉಕ್ರೇನ್‌ನ ಮಹಿಳೆಯೊಬ್ಬರು ಅಲ್ಲಿಯೇ ಬಿದ್ದಿದ್ದ ನವೀನ್ ಅವರ ಫೋನನ್ನು ತೆಗೆದುಕೊಂಡು ಅದರಲ್ಲಿ ತನಗೆ ಕರೆ ಮಾಡಿದ್ದರು. ನವೀನ್ ಮೃತಪಟ್ಟಿರುವುದನ್ನು ಮಹಿಳೆ ತನಗೆ ತಿಳಿಸಿದ್ದರು ಹಾಗೂ ಮೃತ ದೇಹವನ್ನು ಶವಾಗಾರಕ್ಕೆ ಕೊಂಡೊಯ್ಯಲಾಗಿದೆಯೆಂದು ಆಕೆ ಮಾಹಿತಿ ನೀಡಿರುವುದಾಗಿ ಪ್ರಹಾರಾಜ್ ತಿಳಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...