ಅನಧಿಕೃತ ಬಿಪಿಎಲ್ ಕಾರ್ಡ್ - ಇಲಾಖೆಗೆ ಹಾಜರುಪಡಿಸಲು ಸೂಚನೆ

Source: so news | Published on 23rd January 2020, 12:14 AM | Coastal News | Don't Miss |


ಮಂಗಳೂರು :ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ.
ಗ್ರಾಮ ಪಂಚಾಯತಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು ಕ್ರಮ ಕೈಗೊಂಡಿದ್ದರೂ,  ಕೆಲವೇ ಪಡಿತರ ಚೀಟಿದಾರರು ಮಾತ್ರ ಬಿಪಿಎಲ್ ಪಡಿತರ ಚೀಟಿಯನ್ನು ಕಚೇರಿಗೆ ಹಾಜರು ಪಡಿಸಿರುತ್ತಾರೆ. ಆದಾಗ್ಯೂ ಇನ್ನೂ ನಿಗದಿತ ಮಾನದಂಡಗಳ ಹೊರತಾಗಿ ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವಾಹನಗಳ ಮಾಲಿಕತ್ವದ ಬಗ್ಗೆ ಆರ್‍ಟಿಓ ಡಾಟಾ,  ಖಾಸಗಿ/ಸರಕಾರಿ/ನಿಗಮ/ಮಂಡಳಿಗಳ ಸಿಬ್ಬಂದಿಗಳ ಮಾಹಿತಿಯನ್ನು ಪಡೆದು, ಪಡಿತರ ಚೀಟಿಯೊಂದಿಗೆ ಜೋಡಣೆಯಾಗಿರುವ ಆಧಾರ್ ಸಂಖ್ಯೆಯನ್ನು ತಾಳೆ ನೋಡುವುದು,  ಕಟ್ಟಡ/ಭೂಮಿ ವಿಸ್ತೀರ್ಣದ ವಿವರದ ಬಗ್ಗೆ ಸಂಬಂಧ ಪಟ್ಟ ಕಛೇರಿಯಿಂದ ಮಾಹಿತಿ ಪಡೆದುಕೊಳ್ಳುವುದು ಇವೇ ಮುಂತಾದ ಕ್ರಮ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ಕಂಡು ಬಂದ ಅನರ್ಹ ಪಡಿತರ ಚೀಟಿದಾರರ ವಿರುದ್ಧದ ಕರ್ನಾಟಕ (ರೇಷನ್ ಕಾರ್ಡ್ ಅನಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಗಟ್ಟುವುದು) ಆದೇಶ 1977 ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಆದುದರಿಂದ ಯಾರು ಅನರ್ಹ ಪಡಿತರ ಚೀಟಿ ಹೊಂದಿರುತ್ತಾರೆಯೋ ಅಂತಹವರು ಕೂಡಲೇ ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ತಾಲೂಕು ಕಚೇರಿಗೆ ಹಾಜರುಪಡಿಸುವಂತೆ ತಹಶೀಲ್ದಾರರು, ಮಂಗಳೂರು ತಾಲೂಕು ಇವರ ಪ್ರಕಟಣೆ ತಿಳಿಸಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...