ಅನಧಿಕೃತ ಚಿಕಿತ್ಸಾಲಯಗಳ ಮೇಲೆ ದಾಳಿ ನಡೆಸಿದ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು

Source: sonews | By Staff Correspondent | Published on 7th November 2020, 6:35 PM | State News |

ಶ್ರೀನಿವಾಸಪುರ :  ರಾಯಲ್ಪಾಡ್‌ ಹಾಗೂ ಲಕ್ಷ್ಮೀಪುರ ಗ್ರಾಮಗಳಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಚಿಕಿತ್ಸಾಲಯಗಳಿಗೆ ಆರೋಗ್ಯ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬೀಗ ಮುದ್ರೆ ಹಾಕಿ, ಚಿಕಿತ್ಸಾಲಯ ನಡೆಸಲು ಹೊಂದಿರುವ ದಾಖಲೆಗಳೊಂದಿಗೆ ತಾಲ್ಲೂಕು ಆರೋಗ್ಯಾಧಿಕಾರಿಯನ್ನು ಭೇಟಿಯಾಗುವಂತೆ ಸೂಚಿಸಿ ಬಾಗಿಲಿಗೆ ನೋಟಿಸ್‌ ಅಂಟಿಸಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ ಮಾತನಾಡಿ, ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅನಧಿಕೃತ ಚಿಕಿತ್ಸಾಲಯಗಳಿಗೆ ಬೀಗ ಮುದ್ರೆ ಹಾಕಿ, ವೈದ್ಯಕೀಯ ಸೇವೆ ನಡೆಸಲು ತಮ್ಮ ಬಳಿ ಇರುವ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಲಾಗಿತ್ತು. ಆದರೆ ಯಾರೊಬ್ಬರೂ ಸರಿಯಾದ ದಾಖಲೆ ನೀಡಲಿಲ್ಲ. ಬದಲಿಗೆ ಮತ್ತೆ ತಮ್ಮ ಹಿಂದಿನ ಚಾಳಿ ಮುಂದುವರಿಸಿದ್ದರು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅನಧಿಕೃತ ಕ್ಲಿನಿಕ್‌ಗಳಿಗೆ ಬೀಗ ಮುದ್ರೆ ಹಾಕುವಂತೆ ಆದೇಶಿಸಿದ್ದಾರೆ ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಸಿ.ವಿಜಯ, ಆರೋಗ್ಯ ನಿರೀಕ್ಷಕ ಸುಬ್ರಮಣಿ, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ನರಸಿಂಹಮೂರ್ತಿ, ಹರೀಶ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...