ಹರ್ಯಾಣ ಕೋಮು ಹಿಂಸಾಚಾರ; ಧಾರ್ಮಿಕ ಯಾತ್ರೆಯಲ್ಲಿ ಶಸ್ತ್ರಾಸ್ತ್ರ ಹೇಗೆ ಬಂತು? ಕೇಂದ್ರದ ಸಹಾಯಕ ಸಚಿವ ರಾವ್ ಇಂದ್ರಜಿತ್ ಸಿಂಗ್

Source: Vb | By I.G. Bhatkali | Published on 3rd August 2023, 11:54 AM | National News |

ಹೊಸದಿಲ್ಲಿ: ಹರ್ಯಾಣದ ನೂಹ‌ನಲ್ಲಿ ಧಾರ್ಮಿಕ ಯಾತ್ರೆಯಲ್ಲಿ ಪಾಲ್ಗೊಂಡವರು ತಲವಾರು, ದೊಣ್ಣೆಗಳನ್ನು ಹಿಡಿದುಕೊಂಡು ಹೋಗಿರುವುದು ಸರಿಯಲ್ಲ ಎಂದು ಗುರುಗ್ರಾಮದ ಸಂಸದ ಹಾಗೂ ಕೇಂದ್ರದ ಸಹಾಯಕ ಸಚಿವ ರಾವ್ ಇಂದ್ರಜಿತ್ ಸಿಂಗ್ ಹೇಳಿದ್ದಾರೆ.

ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿಂಗ್, ಧಾರ್ಮಿಕ ಯಾತ್ರೆಯಲ್ಲಿ ಭಾಗವಹಿಸುವವರು ಶಸ್ತ್ರಾಸ್ತ್ರಗಳನ್ನು ಯಾಕೆ ಕೊಂಡೊಯ್ಯಬೇಕು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಉಭಯ ಕಡೆಯ ಪ್ರಚೋದನೆ ಹಿಂಸಾಚಾರ ಭುಗಿಲೇಳಲು ಕಾರಣವಾಯಿತು ಎಂದಿದ್ದಾರೆ.

ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಶಸ್ತ್ರಾಸ್ತ್ರಗಳನ್ನು ನೀಡಿದವರು ಯಾರು? ತಲವಾರು, ದೊಣ್ಣೆಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡವರು ಯಾರು?, ಇದು ತಪ್ಪು. ಈ ಕಡೆಯಿಂದಲೂ ಪ್ರಚೋದನೆ ನಡೆದಿದೆ. ಇನ್ನೊಂದು ಕಡೆಯಿಂದ ಪ್ರಚೋದನೆ ನಡೆದಿಲ್ಲ ಎಂದು ನಾನು ಹೇಳುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...