ಕೇಂದ್ರ ಸಚಿವ ರಾಮವಿಲಾಸ್ ಪಾಸ್ವನ್ ಇನ್ನಿಲ್ಲ

Source: sonews | By Staff Correspondent | Published on 8th October 2020, 9:36 PM | National News |

ಹೊಸದಿಲ್ಲಿ: ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ  ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ (74 ವರ್ಷ)ಗುರುವಾರ ದಿಲ್ಲಿ  ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದೇಶದ ಪ್ರಮುಖ ದಲಿತ ನಾಯಕನಾಗಿರುವ ಪಾಸ್ವಾನ್  ನಾಲ್ಕು ದಶಕಗಳಿಗೂ ಅಧಿಕ ಸಮಯದಿಂದ ಸಕ್ರಿಯ ರಾಜಕಾರಣದಲ್ಲಿದ್ದರು.

ಪಾಪಾ.. ಈಗ ನೀವು ಈ ಜಗತ್ತಿನಲ್ಲಿ ಇಲ್ಲ. ಆದರೆ, ನೀವು ಯಾವಾಗಲೂ ನನ್ನ ಜೊತೆಯೇ ಇರುತ್ತೀರಿ ಎಂದು ನನಗೆ ಗೊತ್ತಿದೆ.. ಮಿಸ್ ಯೂ ಪಾಪಾ ಎಂದು …. ಎಂದು ಟ್ವೀಟ್ ಮಾಡಿರುವ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್  ಈ ಮೂಲಕ ತಂದೆಯ ನಿಧನ ಸುದ್ದಿಯನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದರು.

ಕಳೆದ ಕೆಲವು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಸ್ವಾನ್ ಕೇಂದ್ರ ಸರಕಾರದಲ್ಲಿ ಗ್ರಾಹಕ ವ್ಯವಹಾರ, ಆಹಾರ ಹಾಗೂ ಸಾರ್ವಜನಿಕ ವಿತರಣಾ ಸಚಿವರಾಗಿದ್ದರು.

ಪಾಸ್ವಾನ್ ಬಿಹಾರದ ಖಗಾರಿಯಾದಲ್ಲಿ ಜುಲೈ 5,1946ರಲ್ಲಿ ಜನಿಸಿದ್ದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...