ಅಂಕೋಲಾದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯಕ ಅವರಿದ್ದ ಕಾರು ಪಲ್ಟಿ. ಇಬ್ಬರ ದುರ್ಮರಣ. ಮೂವರಿಗೆ ಗಾಯ.

Source: SO News | By Laxmi Tanaya | Published on 11th January 2021, 10:41 PM | National News |

ಅಂಕೋಲಾ :  ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರಿದ್ದ ಕಾರು ಪಲ್ಟಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹೊಸಕಂಬಿ ಬಳಿ ನಡೆದಿದೆ.

ಯಲ್ಲಾಪುರದಿಂದ  ಗೋಕರ್ಣ ಕಡೆ ತೆರಳುತ್ತಿದ್ದಾಗ   ಅಪಘಾತ ಸಂಭವಿಸಿದೆ
ಘಟನೆಯಲ್ಲಿ ಸಚಿವರ ಪತ್ನಿ ವಿಜಯಾ (58),  ಆಪ್ತ ಕಾರ್ಯದರ್ಶಿ ದೀಪಕ್ ಗುಮೆ  ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ಕಾರು ಪಲ್ಪಿಯಾಗಿದ್ದರಿಂದ  ಸಚಿವ ಶ್ರೀಪಾದ್ ಎಡಗೈಗೆ ಪೆಟ್ಟಾಗಿದ್ದು  ಗೋವಾದ ಬಾಂಬೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಗನ್‌ಮ್ಯಾನ್ ತುಕಾರಾಮ ಪಾಟೀಲ್, ಚಾಲಕ ಚಂದನ್ ಹಾಗೂ ಸಾಯಿಕಿರಣ ಸೇಟಿಯಾ ಅವರ್ಸಾ ಎಂಬುವವರಿಗೆ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗಿದೆ.

 ಅಂಕೋಲಾ ಪೋಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...