ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ - ಕನ್ನಡದಲ್ಲಿ ಪರೀಕ್ಷೆ ಬರೆಯಲು ಈ ಬಾರಿ ಅವಕಾಶ : ವಿ ಸೋಮಣ್ಣ
ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ಕರ್ನಾಟಕ ರಾಜ್ಯದ ಜನತೆಗೆ ಅನುಕೂಲವಾಗುವಂತೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.
ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು.
2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.