ವೈವಿಧ್ಯತೆಯಲ್ಲಿ ಏಕತೆ ಮೂಲಮಂತ್ರವಾಗಲಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಮುಖ್ಯಮಂತ್ರಿ ಆಶಯ

Source: Vb | By I.G. Bhatkali | Published on 16th August 2023, 9:28 AM | State News |

ಬೆಂಗಳೂರು: ಇದು ಎಲ್ಲರ ಭಾರತ, ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ. ಇದನ್ನು ಪ್ರತೀ ಕ್ಷಣವೂ ನೆನಪಿಸಿಕೊಳ್ಳೋಣ. ಅಂತಿಮವಾಗಿ 'ಮನುಷ್ಯ ಜಾತಿ ತಾನೊಂದೆ ವಲಂ' ಎಂಬ ಪಂಪನ ಮಾತುಗಳು ಸಮಸ್ತ ಜನಕೋಟಿಯ ಘೋಷ ವಾಕ್ಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

ಮಂಗಳವಾರ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ನಾಡಿನ | ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿ ಮಾತನಾಡಿದ ಅವರು, ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು ಎಂದರು.

ಆ.27ಕ್ಕೆ ಗೃಹಲಕ್ಷ್ಮಿ ಜಾರಿ:
ಬಡತನ ವಿಚಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಲ್ಲವು. ಈ ಹಿನ್ನೆಲೆಯಲ್ಲಿ ನಮ್ಮ ಸರಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2,000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.

ಸ್ಥಗಿತವಾಗಿದ್ದ ಕಾರ್ಯಕ್ರಮಗಳ ಮರುಜಾರಿ: ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಅದೇ ರೀತಿ, ಅವಕಾಶ ವಂಚಿತ ಸಮುದಾಯಗಳ ಹಿತ ರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾ ಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪ ಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ ಎಂದು ಉಲ್ಲೇಖಿಸಿದರು.

ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ವಿಶೇಷ ಯೋಜನೆ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ರದ್ದುಪಡಿಸುವ ಮೂಲಕ ಡೀಮ್ ವೆಚ್ಚದ ಹೆಸರಲ್ಲಿ ಈ ಸಮುದಾಯಗಳಿಗೆ ಮೀಸಲಿರುವ ಅನುದಾನ ಇತರ ಕಾರ್ಯಗಳಿಗೆ ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಅವರು, ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಜನರಿಗೆ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಾಲ-ಸಹಾಯಧನ ಸೌಲಭ್ಯ ನೀಡಲಾಗುವುದು ಎಂದು ಪ್ರಕಟಿಸಿದರು.

ದಮನಿತ ವರ್ಗಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪರಿಶಿಷ್ಟ ಜಾತಿ, ಪಂಗಡಗಳ ಜನರಿಗೆ ನೀಡುತ್ತಿದ್ದ ಗುತ್ತಿಗೆ ಮೊತ್ತದ ಮಿತಿಯನ್ನು 50 ಲಕ್ಷ ರೂ. ಗಳಿಂದ 1 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ.ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಲಾಗುವುದು ಎಂದು ಅವರು ಹೇಳಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...