ಸೆ.3 ರ ಮನಾಪ ಮತದಾನ ದಿನದಂದು ಪಾಲಿಕೆ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ; ಖಾಸಗಿ ವಲಯ ನೌಕರರಿಗೆ ವೇತನ ಸಹಿತ ರಜೆ - ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Source: SO News | By Laxmi Tanaya | Published on 31st August 2021, 10:25 PM | State News | Don't Miss |

ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ  ಮತದಾನ ನಡೆಯಲಿದೆ. ಮತದಾನ ದಿನದಂದು ಮಹಾನಗರ ಪಾಲಿಕೆಯ ವ್ಯಾಪ್ತಿಯ ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ವ್ಯಾಪ್ತಿಯ ಎಲ್ಲ ಸರಕಾರಿ, ಅರೆ ಸರಕಾರಿ ಇಲಾಖೆ, ಖಾಸಗಿ ಉದ್ಯೋಗದಾತರು ಈ ಕುರಿತು ಕ್ರಮವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

  ಮಹಾನಗರ ಪಾಲಿಕೆ ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟಂಬರ್ 3 ರಂದು ಶುಕ್ರವಾರ ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು.
 ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಆಯಾ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
 ಚುನಾವಣೆ ನಡೆಯುವ ವಾರ್ಡ್‍ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು, ಆದರೆ ಚುನಾವಣೆ ನಡೆಯುತ್ತಿರುವ ವಾರ್ಡಿನ ವ್ಯಾಪ್ತಿಯಲ್ಲಿ ನೊಂದಾಯಿತ ಮತದಾರ ಆಗಿರುವವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.

 ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ, ತುರ್ತುಸೇವೆ ಅಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಮತ್ತು ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು. ಈ ಆದೇಶವು ಸೆಕ್ಷನ್ 25, ನೆಗೋಷಿಯೆಬಲ್ ಇನ್ಸ್ಟ್ರುಮೆಂಟ್ ಆ್ಯಕ್ಟ್ 1881 ರಡಿ ಬರುವ ಎಲ್ಲಾ ಸಂಸ್ಥೆಗಳಿಗೂ ಸಹ ಅನ್ವಯಿಸುತ್ತದೆ. 
 ಸಂಬಂಧಿಸಿದ ಎಲ್ಲ ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪನಿ, ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳವರು ಈ ಅಧಿಸೂಚನೆಯನ್ನು ಪಾಲಿಸಿ, ಎಲ್ಲ ನೌಕರರಿಗೆ ಮತದಾನ ಮಾಡಲು  ಅನುಕೂಲವಾಗುವಂತೆ ಸೆಪ್ಟೆಂಬರ್ 3 ರಂದು ವೇತನ ಸಹಿತ ರಜೆ ನೀಡಬೇಕೆಂದು  ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...