ಅಪರಿಚಿತ ವ್ಯಕ್ತಿಯ ಶವ ಪತ್ತೆ

Source: so news | By MV Bhatkal | Published on 13th June 2021, 4:19 PM | Coastal News | Don't Miss |

ಭಟ್ಕಳ:  ತಾಲೂಕಿನ ಶಂಸುದ್ದೀನ್ ಸರ್ಕಲ್ ಸಮೀಪದ ಬಸ್ ನಿಲ್ದಾಣದ ಎದುರಿನ ಅಂಗಡಿ  ಮುಂಬಾಗದಲ್ಲಿ ಸುಮಾರು 55 ರಿಂದ 60 ವಯಸ್ಸಿನ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ ಘಟನೆ ರವಿವಾರ ನಡೆದಿದೆ.

5.6 ಎತ್ತರ, ಕಪ್ಪು ಬಿಳಿ ಮಿಶ್ರಿತ ಕೂದಲು, ಕಂದು ಮೈಬಣ್ಣ, ದುಂಡಗಿನ ಮುಖ, ಸಾಧಾರಣ ಮೈಕಟ್ಟನ್ನು ಹೊಂದಿದ್ದಾನೆ. ಈತನು ಕಂದು ಬಣ್ಣದ ಪ್ಯಾಂಟ್‌, ಬಿಳಿ ಚೆಕ್ಸ್‌ ಗೆರೆಯುಳ್ಳ ಬಿಳಿಬಣ್ಣದ ಪೂರ್ಣ ತೋಳಿನ ಅಂಗಿಯನ್ನು ಧರಿಸಿದ್ದಾನೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ,
ಅತಿಯಾದ ಕುಡಿತ ದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.ಈತ ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಎನ್ನಲಾಗಿದೆ. ಮೃತ ದೇಹವನ್ನು ಪುರಸಭೆಗೆ ಹಸ್ತಾಂತರಿಸಿದ್ದು ಪುರಸಭೆ ಪೌರ ಕಾರ್ಮಿಕರು ಮತ್ತು ಪೋಲಿಸರು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...