ಭಟ್ಕಳ ಖಾಝಿ ಮೌಲಾನ ಮುಹಮ್ಮದ್ ಇಕ್ಬಾಲ್ ಮೇಲೆ ಬಂದೂಕಿನಿಂದ ದಾಳಿಗೆ ಯತ್ನ: ದೂರು ದಾಖಲು

Source: S O News Service | By I.G. Bhatkali | Published on 8th February 2020, 10:10 PM | Coastal News |

ಭಟ್ಕಳ : ಇಲ್ಲಿನ ಮದಿನಾ ಕಾಲೋನಿಯಲ್ಲಿರುವ ಭಟ್ಕಳದ ಖ್ಯಾತ ವಿದ್ವಾಂಸ ಹಾಗೂ ಜಮಾತುಲ್ ಮುಸ್ಲಿಮೀನ್ ಪ್ರಧಾನ ಕಾಜಿ ಮೌಲನ ಮೋಹಮ್ಮದ್ ಇಕ್ಬಾಲ್ ಮುಲ್ಲಾ ಅವರ ಮನೆಯಲ್ಲಿ ಶನಿವಾರ ಬೆಳಗ್ಗೆ ಸುಮಾರು 4:45 ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಬಂದೂಕು ಹಿಡಿದುಕೊಂಡು  ದಾಳಿಮಾಡಲು ಯತ್ನಿಸಿದ ಘಟನೆ ಜರುಗಿದೆ. 

ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಮಂದಿ ಪೊಲೀಸ್ ಸ್ಟೇಷನ್ ಮುಂದೆ ಜಮಾಯಿಸಿದ್ದರು ಮೌಲಾನ ರ ಮೇಲೆ ನಡೆದಂಥ ಅಲ್ಲೇ ಪ್ರಯತ್ನ ಪ್ರಕರಣವು ಅತ್ಯಂತ ಗಂಭೀರ ಸ್ವರೂಪ ಪಡೆದುಕೊಂಡಿದ್ದು ಪೊಲೀಸರು ಕೂಡಲೇ ಘಟನೆಯ ತನಿಖೆ ಸಂಬಂಧಪಟ್ಟಂತೆ ತನಿಖೆ ನಡೆಸಿ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. 

ಕಳೆದ ಕೆಲವು ದಿನಗಳ ಹಿಂದೆ ಇದೇ ಮೂಲ ನರಿಗೆ  ಶಿರೂರು ಬಲಿ ಇವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಇವರನ್ನು ನಿಂದಿಸಿದ್ದು ಘಟನೆ ಮತ್ತು ಇಂದು ನಡೆದ ಘಟನೆಗೆ ಏನಾದರೂ ಸಂಬಂಧವಿದೆಯೇ ಎನ್ನುವ ಬಗ್ಗೆ ಕೂಲಂಕಷವಗಿ ತನಿಖೆ ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಪೊಲೀಸರು ಕುರಿತಂತೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ ಹೆಚ್ಚಿನ ವಿಷಯ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Read These Next

ಮುಂಡಗೋಡ: ಛತ್ರಪತಿ ಶಿವಾಜಿ ಎಲ್ಲ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದ : ಎಲ್.ಟಿ.ಪಾಟೀಲ್

ಎಲ್ಲ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದು ಧರ್ಮವನ್ನು ಉಳಿಸಿ ಸಂರಕ್ಷಣೆ ಮಾಡಿದ ಛತ್ರಪತಿ ಶಿವಾಜಿ. 17ನೇ ಶತಮಾನದಲ್ಲಿ ...