ಅನ್ಲಾಕ್ 4 ಮಾರ್ಗಸೂಚಿ ಪ್ರಕಟ; ಸೆ.30 ರ ವರೆಗೂ ಶಾಲಾ ಕಾಲೇಜುಗಳು ಬಂದ್, ಮೆಟ್ರೋ ಸೇವೆಗೆ ಅನುಮತಿ

Source: sonews | By Staff Correspondent | Published on 29th August 2020, 10:13 PM | National News | Don't Miss |

ಹೊಸದಿಲ್ಲಿ : ಸೆಪ್ಬಂಬರ್ 1ರಿಂದ ಜಾರಿಗೆ ಬರಲಿರುವ ಅನ್‌ಲಾಕ್-4.0ರ ನೂತನ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದೆ. ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ ಪ್ರತಿಕ್ರಿಯೆ ಹಾಗೂ ಸಂಬಂಧಿತ ಕೇಂದ್ರ ಸಚಿವಾಲಯಗಳು ಹಾಗೂ ಇಲಾಖೆಗಳೊಂದಿಗೆ ನಡೆಸಿದ ವ್ಯಾಪಕ ಚರ್ಚೆಯ ಆಧಾರದಲ್ಲಿ ಈ ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.

ನೂತನ ಮಾರ್ಗಸೂಚಿಯಂತೆ ಸೆಪ್ಟಂಬರ್ 7ರಿಂದ ಮೆಟ್ರೋ ಸೇವೆಯನ್ನು ಹಂತ ಹಂತವಾಗಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟಂಬರ್ 21ರಿಂದ ಅನ್ವಯವಾಗುವಂತೆ ಓಪನ್ ಏಯರ್ ಥಿಯೇಟರ್‌ಗಳಿಗೆ ತೆರೆಯಲು ಅನುಮತಿ ನೀಡಲಾಗಿದೆ. ಶಾಲೆ ಹಾಗೂ ಕಾಲೇಜುಗಳ ಮುಚ್ಚುಗಡೆ ಮುಂದುವರಿಯಲಿದೆ ಕಂಟೈನ್ಮೆಂಟ್‌ನ ವಲಯದ ಹೊರಗೆ ಇರುವ ಶಾಲೆಗಳಿಗೆ ತಮ್ಮ ಅಧ್ಯಾಪಕರ ಮಾರ್ಗಸೂಚಿಯ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ಭೇಟಿ ನೀಡಲು 9ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅನುಮತಿ ನೀಡಲಾಗಿದೆ. ಇದಕ್ಕೆ ವಿದ್ಯಾರ್ಥಿಗಳ ಹೆತ್ತವರ ಅಥವಾ ಪೋಷಕರ ಲಿಖಿತ ಒಪ್ಪಿಗೆ ಅಗತ್ಯ ಇರುತ್ತದೆ ಎಂದು ಅದು ತಿಳಿಸಿದೆ. ಅಂತರ್ ರಾಜ್ಯ ಹಾಗೂ ರಾಜ್ಯದ ಒಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಟಕ್ಕೆ ಯಾವುದೇ ನಿರ್ಬಂಧ ಇಲ್ಲ. ಈ ಸಂಚಾರಕ್ಕೆ ಯಾವುದೇ ಪ್ರತ್ಯೇಕ ಅನುಮತಿ ಅಥವಾ ‘ಇ’ ಅನುಮತಿಯ ಅಗತ್ಯ ಇಲ್ಲ.

ಸೆಪ್ಟಂಬರ್ 21ರ ಬಳಿಕ 100ಕ್ಕಿಂತ ಒಳಗೆ ಜನ ಸೇರಿಸಿ ಸಾಮಾಜಿಕ, ಶೈಕ್ಷಣಿಕ, ಕ್ರೀಡಾ, ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ, ರಾಜಕೀಯ ಹಾಗೂ ಇತರ ಸಭೆಗಳನ್ನು ನಡೆಸಲು ಅವಕಾಶ ಇದೆ. ಆದರೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು, ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಲಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ವ್ಯಾಪಕ ಚರ್ಚೆ ನಡೆಸಿದ ಬಳಿಕ ಶಾಲೆಗಳು, ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಸಂಸ್ಥೆಗಳನ್ನು ಸೆಪ್ಟಂಬರ್ 30ರ ವರೆಗೆ ಮುಚ್ಚಲು ತೀರ್ಮಾನಿಸಲಾಗಿದೆ. ಆನ್‌ಲೈನ್ ಹಾಗೂ ದೂರ ಶಿಕ್ಷಣಕ್ಕೆ ಅವಕಾಶ ನೀಡಲಾಗಿದೆ. ನ್ಯಾಷನಲ್ ಸ್ಕಿಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ಸ್, ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ಸ್ (ಐಟಿಐ) ಹಾಗೂ ಶಾರ್ಟ್ ಟರ್ಮ್ ಟೈನಿಂಗ್ ಸೆಂಟರ್‌ಗಳಲ್ಲಿ ಸ್ಕಿಲ್ ಅಥವಾ ಉದ್ಯಮ ತರಬೇತಿಗೆ ಅವಕಾಶ ನೀಡಲಾಗುವುದು. ನ್ಯಾಶನಲ್ ಇನ್‌ಸ್ಟಿಟ್ಯೂಟ್ ಫಾರ್ ಎಂಟರ್‌ಪ್ರೆನ್ಯರ್‌ಶಿಪ್ ಹಾಗೂ ಸ್ಮಾಲ್ ಬ್ಯುಸಿನಸ್ ಡೆವಲಪ್‌ಮೆಂಟ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಎಂಟರ್‌ಪ್ರೈನರ್‌ಶಿಪ್ ಹಾಗೂ ಅವರ ತರಬೇತಿ ಪೂರೈಸುವವರಿಗೆ ಕೂಡ ಅನುಮತಿ ನೀಡಲಾಗಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...