ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಫಾರ್ಮಿಂಗ್ ಸೊಸೈಟಿ ಜಮೀನು ಸಾಗುವಳಿದಾರ ರೈತರಿಗೆ ಮಾಲೀಕತ್ವ ನೀಡಲು ಶೀಘ್ರ ಕ್ರಮ: ಸಚಿವ ಸಂತೋಷ ಲಾಡ್

Source: SO News | By Laxmi Tanaya | Published on 15th July 2023, 10:52 PM | State News | Don't Miss |

ಧಾರವಾಡ : ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ ಮಾಡುವ ರೈತರ ಹೆಸರಿಗೆ ಖಾತಾ ಮಾಡಲು ನಿಯಮಾವಳಿ ಪ್ರಕಾರ ಕ್ರಮ ವಹಿಸಲಾಗುವುದು ಎಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

 ಅವರು  ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಧಾರವಾಡ, ಅಳ್ನಾವರ ಹಾಗೂ ಕಲಘಟಗಿ ತಾಲೂಕಿನ ಫಾರ್ಮಿಂಗ್ ಸೊಸೈಟಿ ಜಮೀನನ್ನು ಸಾಗುವಳಿದಾರರಿಗೆ ಮಂಜೂರಾತಿ ಕುರಿತು ಸಂಬಂಧಿಸಿದ ರೈತರು ಹಾಗೂ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ  ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಧಾರವಾಡ, ಅಳ್ನಾವರ ಹಾಗೂ ಕಲಘಟಗಿ ತಾಲೂಕಿನಲ್ಲಿ ಫಾರ್ಮಿಂಗ್ ಸೊಸೈಟಿಗಳಿಗೆ ಸರ್ಕಾರಿ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಕೃಷಿ ಕಾರ್ಯಗಳಿಗೆ ಬಳಸಲು ಸರ್ಕಾರವು ಜಮೀನು ಮಂಜೂರು ಮಾಡಿತ್ತು. ಈಗ ಸೊಸೈಟಿಗಳು ಅಸ್ಥಿತ್ವ ಕಳೆದುಕೊಂಡಿದ್ದು, ಸಾಗುವಳಿ ಮಾಡುತ್ತಿದ್ದ ರೈತರೆ ಆ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಈಗಾಗಲೇ ವ್ಯವಸಾಯ ಮಾಡುತ್ತಿರುವ ರೈತರ ಹೆಸರಿಗೆ ಜಮೀನಿನ ಮಾಲೀಕತ್ವ ನೀಡಲು ತಿರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

 ಸಂಬಂಧಿಸಿದ ತಾಲೂಕಿನ ತಹಶೀಲ್ದಾರ ಹಾಗೂ ಅವರ ಅಧಿಕಾರಿಗಳ ಮೂಲಕ ಸೊಸೈಟಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈಗಾಗಲೇ ಬಹಳಷ್ಟು ರೈತರು ನಿಗಧಿತ ಅರ್ಜಿ ನಮೂನೆಯನ್ನು ಸಲ್ಲಿಸಿದ್ದು, ಸಲ್ಲಿಸಿರುವ ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. ಕೆಲವು ರೈತರು ಭೂಮಿಯನ್ನು ಸಾಗುವಳಿ ಮಾಡುತ್ತಿದ್ದರೂ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿರುವುದಿಲ್ಲ. ಇಂತಹ ರೈತರಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಮಾಡಿಕೊಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಸಚಿವರು ಹೇಳಿದರು.

 ಫಾರ್ಮಿಂಗ್ ಸೊಸೈಟಿಯ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು, ತಮ್ಮ ಸಾಗುವಳಿ ಜಮೀನನ್ನು ತಮಗೆ ಮಂಜೂರಾತಿ ಮಾಡಿಕೊಡಲು ಬಹುದಿನಗಳಿಂದ ಮನವಿ ಮಾಡುತ್ತಿದ್ದಾರೆ. ಸಾಗುವಳಿದಾರ ರೈತರಿಗೆ ಅನ್ಯಾಯವಾಗದಂತೆ ಕ್ರಮವಹಿಸಿ, ಸರ್ಕಾರದ ನಿಯಮಾವಳಿ ಅನುಸಾರ ಗರಿಷ್ಠ ಮಂಜೂರಾತಿ ಮಾಡಬಹುದಾದ ಮತ್ತು ಈಗಾಗಲೇ ಸಾಗುವಳಿ ಮಾಡುತ್ತಿರುವ ರೈತರಿಗೆ ಆ ಜಮೀನು ಮಂಜೂರಾತಿ ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಮತ್ತು ರೈತರಿಗೆ ನ್ಯಾಯ ಒದಗಿಸುತ್ತೇನೆ ಎಂದು ಸಚಿವರು ತಿಳಿಸಿದರು.

 ಉಪ ವಿಭಾಗಾಧಿಕಾರಿ ಅಶೋಕ ತೆಲಿ ಅವರು ಮಾತನಾಡಿ, ಮೂರು ತಾಲೂಕಿನ ಫಾರ್ಮಿಂಗ್ ಸೊಸೈಟಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ತೊಂದರೆ ಇಲ್ಲ. ಸಚಿವರು ರೈತರ ಈ ಸಮಸ್ಯೆ ಬಗೆಹರಿಸುವ ಕುರಿತು ಆಸಕ್ತಿ ವಹಿದ್ದು, ಆದಷ್ಟು ಬೇಗ ರೈತರ ಈ ಸಮಸ್ಯೆ ಮುಕ್ತಾಯವಾಗಲಿದೆ ಎಂದು ರೈತರಿಗೆ ತಿಳಿಸಿದರು.

 ಸಭೆಯಲ್ಲಿ ಸಹಕಾರ ಸಂಘಗಳ ಧಾರವಾಡ ಜಿಲ್ಲಾ ಉಪನಿಬಂಧಕರು, ಅಳ್ನಾವರ ತಹಶೀಲ್ದಾರ ಬಸವರಾಜ ಬೆಣ್ಣೆಶಿರೂರ, ಕಲಘಟಗಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣನವರ, ಧಾರವಾಡ ತಹಶೀಲ್ದಾರ ಕಚೇರಿಯ ಗ್ರೇಡ್-2 ತಹಶೀಲ್ದಾರ ಹಣಮಂತ ಕೊಚ್ಚರಗಿ, ಶೀರಸ್ತೆದಾರ ಮಂಜುನಾಥ ಗುಳಪ್ಪನ್ನವರ, ಧಾರವಾಡ ವೃತ್ತದ ಕಂದಾಯ ನಿರೀಕ್ಷಕ ಗುರು ಸುಣಗಾರ, ಪ್ರಕರಣಗಳ ನಿರ್ವಾಹಕಿ ರಂಜಿತಾ ಹಿರೇಮಠ, ಭೂದಾಖಲೆಗಳ ಇಲಾಖೆಯ ಧಾರವಾಡ ಮತ್ತು ಅಳ್ನಾವರ ತಾಲೂಕಾ ಸಹಾಯಕ ನಿರ್ದೇಶಕ ರಾಜಶೇಖರ ಹಳ್ಳೂರ, ಕಲಘಟಗಿ ತಾಲೂಕಾ ಸಹಾಯಕ ನಿರ್ದೇಶಕ ಎಸ್.ಸಿ.ಕುಲರ್ಕಣಿ ಮತ್ತು ಧಾರವಾಡ, ಅಳ್ನಾವರ, ಕಲಘಟಗಿ ತಾಲೂಕುಗಳ ಫಾರ್ಮಿಂಗ್ ಸೊಸೈಟಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸಂಬಂಧಪಟ್ಟ ಜಮೀನುಗಳ ರೈತರು, ಸಾಗುವಳಿದಾರರು, ಸಂಬಂಧಪಟ್ಟ ಗ್ರಾಮಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...