ಪ್ರವಾಹ ಭೀತಿ :  ಜನರು ವದಂತಿಗಳಿಗೆ ಕಿವಿಗೊಡದಿರುವಂತೆ ಜಿಲ್ಲಾಧಿಕಾರಿ ಮನವಿ

Source: sonews | By Staff Correspondent | Published on 8th August 2019, 9:17 PM | Coastal News | Don't Miss |

ಕಾರವಾರ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜನರು ವದಂತಿಗಳಿಗೆ ಕಿವಿಗೊಡಬಾರದೆಂದು ಜಿಲ್ಲಾಧಿಕಾರಿ ಡಾ ಹರೀಶಕುಮಾರ ಕೆ. ಅವರು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.

ಗುರುವಾರ ಕದ್ರಾದ ನಿರಿಕ್ಷಣಾ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲಾಡಳಿತ ಸಕಲ ರೀತಿಯಲ್ಲಿ ಜನರೊಂದಿಗೆ ಸಹಕಾರ ನೀಡುತ್ತಿದೆ. ಕೊಡಸಳ್ಳಿ ಡ್ಯಾಮ್‍ನಲ್ಲಿ ಬಿರುಕು ಬಿಟ್ಟಿದೆ ಎಂಬುದು ಕೇವಲ ವದಂತಿ. ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡದಿರಲು ಹಾಗೂ ಮುಂಜಾಗೃತಾ ಕ್ರಮವಾಗಿ ಎತ್ತರ ಪ್ರದೇಶ ಮತ್ತು ಪುನರ್ವಸತಿ ಕೇಂದ್ರಗಳಿಗೆ ತೆರಳಬೇಕೆಂದು ಅವರು ತಿಳಿಸಿದರು

ಜಿಲ್ಲೆಯ ಎಲ್ಲಾ ಜಲಾಶಯಗಳು ಸುರಕ್ಷಿತವಾಗಿದ್ದು, ಯಾವುದೇ ಜಲಾಶಯಗಳಲ್ಲಿ ಅಪಾಯ ಮಟ್ಟಕ್ಕಿಂತ ಹೆಚ್ಚಿನ ನೀರನ್ನು ಭರ್ತಿ ಮಾಡಿಲ್ಲ. ಪ್ರವಾಹ ಪರಿಸ್ಥಿತಿಯ ಅವಲೋಕನಕ್ಕಾಗಿ ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ತಂಡ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೌನಿಷ್ ಮೌದ್ಗಿಲ್ ಅವರು ಈಗಾಗಲೇ ಜಿಲ್ಲೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ, ಪುನರ್ವಸತಿ ಕೇಂದ್ರಗಳಿಗೂ ಸಹ ಭೇಟಿ ನೀಡಿದ್ದಾರೆ. ಅಲ್ಲದೇ ಸರ್ಕಾರದ ಪ್ರತಿನಿಧಿಯಾಗಿ ಅವರು ಇಡೀ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

ಭಟ್ಕಳ-ಹೊನ್ನಾವರದಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಇಂದು ಮಳೆ ಕಡಿಯಾದರೆ, ನಾಳೆ ಶುಕ್ರವಾರ ಪ್ರವಾಹ ಸಹಜಸ್ಥಿತಿಗೆ ಬರಬಹುದೆಂಬ ನಿರೀಕ್ಷೆ ಇದೆ. ಅಂಕೋಲಾ ಹಾಗೂ ಕುಮಟಾದಲ್ಲಿ ಮಳೆ ಕಡಿಮೆಯಾದರೆ ಇನ್ನೆರಡು ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬರಬಹುದಾಗಿದೆ. ಆಯಾ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯ ಮಾಡಲಾಗುತ್ತಿದೆ ಎಂದರು.

ಮುಂಡಗೋಡದಲ್ಲಿಯೂ ಮಳೆಯ ಪ್ರಮಾಣ ಅಧಿಕವಾಗಿರುವದರೊಂದಿ  ಪಕ್ಕದ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿ ನೀರು ಹರಿದು ಬಂದು  ಜನಜೀವನ ಅಸ್ತವ್ಯಸ್ತಗೊಂಡಿರುತ್ತದೆ. ಇದರಿಂದಾಗಿ ಅಲ್ಲಿ  2-3 ಪುನರ್ವಸತಿ ಕೇಂದ್ರಗಳನ್ನು ತೆರೆಯುವಂತಾಗಿದೆ. ಉಳಿದಂತೆ ಶಿರಸಿ ಮತ್ತು ಯಲ್ಲಾಪುರದಲ್ಲಿ ಪ್ರವಾಹ ನಿಯಂತ್ರಣದಲ್ಲಿದೆ ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಇಂದು ಸಭೆ ಕರೆದು ಪುನರ್ವಸತಿ ಕೇಂದ್ರಗಳ ಜವಾಬ್ದಾರಿ ನೀಡುವುದರ ಜೊತೆಗೆ ಜನರೊಂದಿಗೆ ಸಂಯಮದಿಂದ ಕಾರ್ಯನಿರ್ವಹಿಸುವಂತೆ ತಿಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಮ್. ರೋಶನ್ ಉಪಸ್ಥಿತರಿದ್ದರು.

   

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...