ನಗರ ಸ್ಥಳೀಯ ಸಂಸ್ಥೆಗಳು ಕೈಗೊಂಡ ಕಾಮಗಾರಿಗಳ ಪಟ್ಟಿ ಕೊಡಿ : ಜಿಲ್ಲಾಧಿಕಾರಿ

Source: sonews | By Staff Correspondent | Published on 14th March 2019, 11:17 PM | Coastal News | Don't Miss |

ಕಾರವಾರ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಸೂಚಿಸಿದ್ದಾರೆ.
    
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ನಗರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ ನಡೆಸಿದ ಅವರು, ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಹೊಸ ಕಾಮಗಾರಿ ಟೆಂಡರ್‍ಗಳ್ನು ಕೈಗೆತ್ತಿಕೊಳ್ಳದಿರಲು ಹಾಗೂ ಈಗಾಗಲೇ ಟೆಂಡರ್ ಆಗಿರುವ ಕಾಮಗಾರಿಯನ್ನು ಆರಂಭಿಸುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚಿಸಿದರು.
    
ಕುಡಿಯುವ ನೀರು ಸೇರಿದಂತೆ ಜನರ ಅತ್ಯಗತ್ಯದ  ಕೆಲಸಗಳನ್ನು ನಿರ್ವಹಿಸಲು ಯಾವುದೇ ಅಭ್ಯಂತರವಿಲ್ಲ ಆದರೆ ಅದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತಿರಬೇಕು ಹಾಗೂ ನ್ಯಾಯ ಬದ್ಧವಾಗಿರಬೇಕು ಎಂದು ಅವರು ಹೇಳಿದರು.
    
ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಆಡಳಿತಾಧಿಕಾರಿಗಳು ಇರುವುದರಿಂದ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವಾಗ ಕಾನೂನಾತ್ಮಕವಾಗಿರಬೇಕು ಅಷ್ಟನ್ನು ಮಾತ್ರ ಮುಖ್ಯಾಧಿಕಾರಿಗಳು ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಇರಿಸಬೇಕು ಎಂದು ಹೇಳಿದರು.
    
ಲೋಕಸಭೆ ಚುನಾವಣೆಗೆ ದೊಡ್ಡ ದೊಡ್ಡ ರ್ಯಾಲಿಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವಾಗ ಸಮಾನ ಅವಕಾಶಗಳನ್ನು ನೀಡಬೇಕು. ಮಾದರಿ ನೀತಿ ಸಂಹಿತೆ ವ್ಯಾಪ್ತಿಯಲ್ಲಿ ಸರಿಯಾದ ನಿರ್ಧಾರಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
    
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ನಗರಾಭಿವೃದ್ಧಿ ಪ್ರಾಧಿಕಾರ ಯೋಜನಾ ನಿರ್ದೇಶಕ ವಿರಕ್ತಮಠ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಪಿ.ನಾಯಕ್, ಕಾರವಾರ ನಗರಸಭೆ ಆಯುಕ್ತ ಎಸ್.ಯೋಗೇಶ್ವರ್ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...