ಉತ್ತರ ಪ್ರದೇಶ: 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ

Source: PTI | By MV Bhatkal | Published on 3rd June 2021, 7:22 PM | National News |

ಲಖನೌ: ಕೋವಿಡ್‌ 19 ಸಾಂಕ್ರಾಮಿಕರ ರೋಗದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಿಕ್ಷಣ ಪದ್ಧತಿಯ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರವೂ ರಾಜ್ಯ ಪರೀಕ್ಷಾ ಮಂಡಳಿ ನಡೆಸುವ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಪ್ರೌಢಶಿಕ್ಷಣ ಇಲಾಖೆಯ ಉಸ್ತುವಾರಿಯೂ ಆಗಿರುವ, ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಹಾಜರಿದ್ದರು.
ವಾರ್ತಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನವನೀತ್‌ ಸೆಹಗಲ್ ಅವರು, ‘ರಾಜ್ಯ ಸರ್ಕಾರ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ‘ ಎಂದು ಖಚಿತಪಡಿಸಿದರು. ರಾಜ್ಯದಲ್ಲಿ ಸುಮಾರು 26 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಣಿಯಾಗಿದ್ದರು.
ರಾಜ್ಯ ಸರ್ಕಾರ ಕಳೆದ ತಿಂಗಳು 10ನೇ ತರಗತಿಯ ಬೋರ್ಡ್‌ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು. ಸುಮಾರು 30 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇಷ್ಟೂ ಮಂದಿ ವಿದ್ಯಾರ್ಥಿಗಳನ್ನು 11ನೇ ತರಗತಿಗೆ ಉತ್ತೀರ್ಣ ಮಾಡಲಾಗಿದೆ

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...