ಕಾರವಾರ: “ನನ್ನ ಮಣ್ಣು ನನ್ನ ದೇಶ” ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Source: S O News | By I.G. Bhatkali | Published on 12th August 2023, 11:05 AM | Coastal News | Don't Miss |

ಕಾರವಾರ: ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ‘ಮೇರಿ ಮಾಟಿ ಮೇರಿ ದೇಶ್’ (ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನದ ಮೂಲಕ ಸಸಿಗಳನ್ನು ನೆಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಅವರು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಸಿಗಳನ್ನು ನೆಡುವುದು ಮತ್ತು ಪಂಚಪ್ರಾಣ ಪ್ರತಿಜ್ಞೆಯನ್ನು ಬೋಧಿಸುವುದು, ಸಾಂಸ್ಕøತಿಕ ಕಾರ್ಯಕ್ರಮ ಜೊತೆಗೆ ದೇಶಕ್ಕಾಗಿ ಬಲಿದಾನಗೈದ ವೀರರ ಹೆಸರುಗಳನ್ನು ಶಿಲಾಫಲಕಗಳ ಕೆತ್ತಬೇಕು. ಈ ಉದ್ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರು, ವೀರ ಯೋಧರನು ಹಾಗೂ ವೀರ ಮರಣ ಹೊಂದಿದ ಕುಟುಂಬದ ಸದಸ್ಯರು, ಕೇಂದ್ರ ಸಶಸ್ತ್ರ ಪೆÇಲೀಸ್ ಪಡೆಗಳ ರಕ್ಷಣಾ ಸಿಬ್ಬಂದಿ ಕರ್ತವ್ಯದ ಸಾಲಿನಲ್ಲಿ ಪ್ರಾಣ ತ್ಯಾಗ ಮಾಡಿದ ರಾಜ್ಯ ಪೆÇಲೀಸ್‍ರನ್ನು ಸೇರಿಸಿ ಅಮೃತ ಸರೋವರಗಳ ಬಳಿ ಶಿಲಾಫಲಕಗಳನ್ನು ನಿರ್ಮಿಸಬೇಕು. ಒಂದು ವೇಳೆ ಅಂತಹ ಯಾವುದೇ ಸ್ಥಳೀಯವಾಗಿ ಲಭ್ಯವಿಲದಿದ್ದರೆ ಸ್ಥಳೀಯ ಪ್ರಮುಖ ಸ್ಥಳಗಳಲ್ಲಿ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯದ ಆವರಣದಲ್ಲಿ ಶಿಲಾಫಲಕಗಳನ್ನು ನಿರ್ಮಿಸಬೇಕು ಎಂದು ಅವರು ಹೇಳಿದರು.

ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರು, ಯೋಧರು, ಹಾಗೂ ಹುತಾತ್ಮರಾದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಯೋಧರ ಕುಟುಂಬ, ಸಿಅರ್‍ಪಿಎಫ್‍ನ ರಕ್ಷಣಾ ಸಿಬ್ಬಂದಿ, ರಾಜ್ಯ ಪೆÇಲೀಸ್ ಇಲಾಖೆಯ ನಿವೃತ್ತ ಸಿಬ್ಬಂದಿ ಮತ್ತು ಕರ್ತವ್ಯದ ಸಾಲಿನಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಕುಟುಂಬಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಮಣ್ಣನ್ನು ಸಂಗ್ರಹಿಸಿದ ಮಣ್ಣಿನ ಕಳಶಗಳನ್ನು ನವದೆಹಲಿಯ ಕರ್ತವ್ಯ ಪಥಕ್ಕೆ ಸಾಗಿಸಿ ಅಮೃತ್ ವಾಟಿಕಾ ಎಂಬ ವಿಶಿಷ್ಟವಾದ ಉದ್ಯಾನವನ್ನು ಅಭಿವೃದ್ಧಿಪಡಿಸಲು ಬಳಸಲಾಗುವುದು ಎಂದು ಅವರು ಹೇಳಿದರು.

“ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮವನ್ನು ಎಲ್ಲಾ ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಯಶಸ್ವಿಯಾಗಿ ಆಯೋಜಿಸಲು ತಮ್ಮ ವ್ಯಾಪ್ತಿಯಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡಂತೆ ಎಲ್ಲರನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಉಪ ವಿಭಾಗಾಧಿಕಾರಿ ಆರ್.ದೇವರಾಜ, ಜಯಲಕ್ಷ್ಮಿ, ಕಲ್ಯಾಣಿ ಕಾಂಬಳೆ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಸ್ಟೇಲ್ಲಾ ವರ್ಗಿಸ್, ನೆಹರು ಯುವ ಕೇಂದ್ರದ  ಜಿಲ್ಲಾ ಯುವ ಅಧಿಕಾರಿ ಯಶ್ವಂತ ಯಾದವ, ತಾ.ಪಂ. ಇಒಗಳು, ತಹಶೀಲ್ದಾರರು, ನಗರಸಭೆ ಪೌರಾಯುಕ್ತರು, ಪಟ್ಟಣ ಪಂಚಾಯತ್ ಮತ್ತು ಪುರಸಭೆ ಅಧಿಕಾರಿಗಳು, ಇತರರು ಇದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...