ಕಾರವಾರ: ಚುನಾವಣಾ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು

Source: S O News | By I.G. Bhatkali | Published on 29th April 2024, 12:18 AM | Coastal News |

ಕಾರವಾರ: ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೆರೆಗೆ , ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿವತಿಯಿಂದ ಮತದಾರಿಗೆ ಜಾಗೃತಿ ಹಾಗೂ ಮತದಾರರಿಗೆ ತಮ್ಮ ಮತಗಟ್ಟೆಗಳನ್ನು ಪರಿಚಯಿಸುವ ಉದ್ದೇಶದಿಂದ, ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಚುನಾವಣಾ ಪರ್ವ; ದೇಶದ ಗರ್ವ ಘೋಷವಾಕ್ಯದ ಧ್ವಜಾರೋಹಣವನ್ನು ನೆರವೇರಿಸುವ ಕಾರ್ಯಕ್ರಮಕ್ಕೆ ಭಾನುವಾರ ಕಾರವಾರ ಸೈಂಟ್ ಮೈಕಲ್ ಶಾಲೆಯ ಮತಗಟ್ಟೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. 

ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಪ್ರತಿಯೊಬ್ಬ ಮತದಾರರು ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಮತ ಯಾವ ಮತಗಟ್ಟೆಯಲ್ಲಿದೆ ಎಂಬುದನ್ನು ಮುಂಚಿತವಾಗಿ ತಿಳಿದುಕೊಳ್ಳಬೇಕು, ಇದರಿಂದ ಮತದಾನದ ದಿನದಂದು ಮತಗಟ್ಟೆಗಳನ್ನು ಹುಡುಕುವ ಗೊಂದಲಗಳಿAದ ಮುಕ್ತರಾಗಬಹುದು ಎಂದರು. 

ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನ ಸುಗಮ ರೀತಿಯಿಂದ ನಡೆಯಲು, ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಹಿರಿಯ ನಾಗರೀಕರಿಗೆ ಮತ್ತು ವಿಶೇಷಚೇತನರಿಗೆ ರ‍್ಯಾಂಪ್, ವೀಲ್ ಚೇರ್ ಹಾಗೂ ಉಚಿತ ವಾಹನ ವ್ಯವಸ್ಥೆ ಕೂಡಾ ಮಾಡಲಾಗುತ್ತಿದ್ದು, ಯಾವುದೇ ಅರ್ಹ ಮತದಾರರು ಮತದಾನದಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಮೇ 7 ರಂದು ಜಿಲ್ಲೆಯ ಎಲ್ಲಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವ ಮೂಲಕ ಮತದಾನದ ಪರ್ವವನ್ನು ಗರ್ವದಿಂದ ಆಚರಿಸುವ ಮೂಲಕ ಜಿಲ್ಲೆಯಲ್ಲಿ ಗರಿಷ್ಠ ಮತದಾನವಾಗುವಂತೆ ಮಾಡಬೇಕು ಎಂದರು.

ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪ್ರಕಾಶ್ ರಜಪೂತ್, ನಗರಸಭೆಯ ಪೌರಾಯುಕ್ತ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
 

Read These Next

ಜೂನ್ 29ರಿಂದ ಜುಲೈ 9 ರವರೆಗೆ  ಅಳ್ವೆಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ

ಭಟ್ಕಳ: ಜಿಲ್ಲೆಯ ಪ್ರಸಿದ್ಧ ಅಲ್ವೇಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಜೂನ್ 29ರಿಂದ ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...