ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ; ತಬಸ್ಸುಮ್ ಶೇಕ್, ಅನನ್ಯಾ, ಸುರಭಿ, ಕೌಶಿಕ್ ರಾಜ್ಯಕ್ಕೆ ಪ್ರಥಮ

Source: Vb | By I.G. Bhatkali | Published on 23rd April 2023, 9:52 PM | Coastal News | State News |

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದಲ್ಲಿ 5,41,807 ವಿದ್ಯಾರ್ಥಿಗಳಲ್ಲಿ 4,04,349 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.74.63 ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ 1,60,860 ವಿದ್ಯಾರ್ಥಿಗಳಲ್ಲಿ 1,19,860 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.74.79 ರಷ್ಟು ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾಗಿದ್ದ 7,02,067 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಇದೇ ಮೊದಲ ಬಾರಿ ಶೇ.74.67ರಷ್ಟು ದಾಖಲೆಯ ಫಲಿತಾಂಶ ಬಂದಿದೆ.

ಬೆಂಗಳೂರಿನ ಎನ್‌ಎಂಆರ್‌ವಿ ಕಾಲೇಜಿನ ವಿದ್ಯಾರ್ಥಿನಿ ತಬಸ್ಸುಮ್ ಶೇಕ್ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕಗಳು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ಎ.ಅನನ್ಯಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗಂಗೋತ್ರಿ ಪಿಯು ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596 ಹಾಗೂ ಬೆಂಗಳೂರಿನ ಜಯನಗರದ (ಎನ್‌ಎಂಕೆಆರ್‌ವಿ) ಆರ್.ವಿ. ಪಿಯು ಕಾಲೇಜು ವಿದ್ಯಾರ್ಥಿನಿ ಸುರಭಿ ಎಸ್. 600ಕ್ಕೆ 596 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸುವ ಮೂಲಕ ಸಾಧನೆ ಗೈದಿದ್ದಾರೆ.

ಶುಕ್ರವಾರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಹಾಗೂ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಫಲಿತಾಂಶ ಪ್ರಕಟಿಸಿದ್ದು, ಮಾರ್ಚ್‌ನಲ್ಲಿ

ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 7,02,067 ವಿದ್ಯಾರ್ಥಿಗಳಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.74.67 ರಷ್ಟು ಫಲಿತಾಂಶ ಬಂದಿದೆ. 

ಅದರಲ್ಲೂ ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಯಾದಗಿರಿಗೆ ಕಡೆಯ ಸ್ಥಾನ ಬಂದಿದೆ. ಒಟ್ಟಾರೆ, ಕಳೆದ ಬಾರಿಗಿಂತ ಈ ಬಾರಿ ಶೇ.12.79 ರಷ್ಟು ಹೆಚ್ಚು ಫಲಿತಾಂಶ ಬಂದಿದೆ ಎಂದರು.

ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.85.71 ರಷ್ಟು ಫಲಿತಾಂಶ ಬಂದಿದೆ. 3,49,901 ಬಾಲಕರು ಪರೀಕ್ಷೆ ಬರೆದಿದ್ದು ಇದರಲ್ಲಿ 2,41,607 ಬಾಲಕರು ತೇರ್ಗಡೆಯಾಗಿ ದ್ದಾರೆ. ಅಂದರೆ, ಶೇ.69.05 ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಅದೇ ರೀತಿ, 3,52,166 ಬಾಲಕಿಯರು ಪರೀಕ್ಷೆ ಬರೆದಿದ್ದು, ಈ ಪೈಕಿ 2,82,602 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಶೇ. 80.25 ರಷ್ಟು ಫಲಿತಾಂಶ ಬಂದಿದೆ ಎಂದು ವಿವರಿಸಿದರು.

ಸರಕಾರಿ ಪಿಯು ಕಾಲೇಜಿನಲ್ಲಿ 42 ಕಾಲೇಜು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಯಾವುದೇ ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿಲ್ಲ. ಅನುದಾನಿತ ಪಿಯು ಕಾಲೇಜಿನಲ್ಲಿ 10 ಶೇ. 100 ರಷ್ಟು ಫಲಿತಾಂಶ, 5 ಶೂನ್ಯ ಫಲಿತಾಂಶ, ಅನುದಾನ ರಹಿತ ಪಿಯು ಕಾಲೇಜಿನಲ್ಲಿ 264 ಕಾಲೇಜು ಶೇ.100 ಫಲಿತಾಂಶ, 73 ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿವೆ ಎಂದು ತಿಳಿಸಿದರು. 1,09,509 ವಿದ್ಯಾರ್ಥಿಗಳು ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದರೆ, 2,47,315 ವಿದ್ಯಾರ್ಥಿಗಳು ಶೇ.60, 90,014 ವಿದ್ಯಾರ್ಥಿಗಳು ಶೇ.50, 77,371 ವಿದ್ಯಾರ್ಥಿಗಳು ಶೇ.35 ಕ್ಕಿಂತ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಪ್ರತೀ ವರ್ಷದಂತೆ ಈ ವರ್ಷವೂ ಉತ್ತೀರ್ಣ ಹಂತದಲ್ಲಿ ಅನುತ್ತೀರ್ಣ ಆಗಿರುವ 15 ಸಾವಿರ ಮಕ್ಕಳಿಗೆ ಎರಡು ವಿಷಯಗಳಿಗೆ ತಲಾ ಐದು ಅಂಕದ ಗ್ರೇಸ್‌ ಮಾರ್ಕ್ಸ್ ಕೊಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...