ಕಾರವಾರ:: ಮತದಾನ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ

Source: S O News Service | By I.G. Bhatkali | Published on 19th April 2019, 11:37 PM | Coastal News |

ಕಾರವಾರ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ 23 ರಂದು ಮತದಾನ ದಿನದಂದು ಎಲ್ಲಾ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ ಎಂದು ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾನ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಜಾ ಪ್ರತಿನಿದಿ ಕಾಯ್ದೆ, 135(ಬಿ) ರಡಿಯಲ್ಲಿ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆ, ನಿಯೋಜಕರು ಅವಕಾಶ ಮಾಡಿಕೊಡಲು ಸೂಚಿಸಲಾಗಿದೆ. 

ಕಾರ್ಮಿಕರಿಗೆ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೇ ಇದ್ದಲ್ಲಿ ಅಂತಹ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...