ಉತ್ತರಾಖಂಡ್ ಚುನಾವಣೆ: ಮಾಜಿ ಸೈನಿಕ ಅಜಯ್ ಕೊತಿಯಾಲ್ ಎಎಪಿ ಸಿಎಂ ಅಭ್ಯರ್ಥಿ; ಕೇಜ್ರಿವಾಲ್ ಘೋಷಣೆ

Source: PTI | By MV Bhatkal | Published on 17th August 2021, 11:55 PM | National News |

ಡೆಹ್ರಾಡೂನ್: 2022ರ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮಾಜಿ ಸೈನಿಕ ಅಜಯ್ ಕೊತಿಯಾಲ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಘೋಷಿಸಿದ್ದಾರೆ.
ರಾಜ್ಯ ರಾಜಕಾರಣಿಗಳ ವರ್ತನೆಯಿಂದ ಬೇಸರಗೊಂಡಿರುವ ಜನರಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ಕೊತಿಯಾಲ್ ಅವರನ್ನು 
ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇಲ್ಲಿನ ಜನರು ರಾಜ್ಯವನ್ನು ಲೂಟಿ ಮಾಡಿದ ರಾಜಕಾರಣಿಗಳಿಂದ ಮುಕ್ತಿ ಪಡೆಯಲು ಬಯಸುತ್ತಾರೆ. ಅವರು ಈಗ ಒಬ್ಬ ಸೇನಾಪತಿಯು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ. ಅವರು ತನ್ನ ಅಧಿಕಾರವನ್ನು ತನ್ನ ಖಜಾನೆ ತುಂಬಿಕೊಳ್ಳಲು ಖರ್ಚು ಮಾಡದೆ ಜನರ ಸೇವೆ ಮಾಡುತ್ತಾರೆ" ಎಂದು ದೆಹಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಆಮ್ ಆದ್ಮಿ ಪಕ್ಷ, ಕೊತಿಯಾಲ್ ನೇತೃತ್ವದಲ್ಲಿ ಉತ್ತರಾಖಂಡವನ್ನು ಹಿಂದೂಗಳಿಗೆ ಜಾಗತಿಕ ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಮಾಡುತ್ತದೆ ಮತ್ತು ರಾಜ್ಯದ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ

 

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...